ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ, ಪೊಲೀಸರು ಅಲರ್ಟ್ ಆಗಿದ್ದು, ಕಾರು ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ನಡುವೆ ಮಾಜಿ ಸಚಿವ ಮುನಿರತ್ನ ಅವರ ಹೆಸರು ಕೂಡ ತಳುಕು ಹಾಕುತ್ತಿದೆ. ಕಾಂಗ್ರೆಸ್ ನವರ ಆರೋಪಕ್ಕೆ ಇದೀಗ ಶಾಸಕ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ.
‘ಲೋಕಸಭಾ ಚುನಾವಣೆ ಹೊತ್ತಿಗೆ ಮುನಿರತ್ನ ಹೊರಗೆ ಇರಬಾರದು. ತಿಹಾರ್ ಜೈಲಿಗೆ ಕಳುಹಿಸಬೇಕು ಅನ್ನೋದು ಅವರ ಆಲೋಚನೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ನಾನೂ ಈಗ ಎದ್ದು ಬಂದಿದ್ದೇನೆ. ಬೆಳಗ್ಗೆಯಿಂದ ಮಧ್ಯಾಹ್ನದ ವೇಳೆಗೆ ಏನಾಗಿದೆ ಎಂಬುದು ನಿಮಗೆ ಗೊತ್ತು. ನನ್ನ ಮನೆ ಮುಂದೆ ಆಕ್ಸಿಡೆಂಟ್ ಆದರೂ ಅದಕ್ಕೆ ಕಾರಣ ಮುನಿರತ್ನ ಎನ್ನುತ್ತಾರೆ.
ಸರ್ಕಾರಿ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣ ಸಂಪೂರ್ಣವಾಗಿ ತನಿಖೆ ನಡೆಯುತ್ತಿದೆ. ಅದರ ಎಲ್ಲಾ ವರದಿ ಹಪರಗೆ ಬರಲಿ. ಸ್ವಾರ್ಥಕ್ಕೆ, ದುರುದ್ದೇಶಕ್ಕೆ ಹೇಳಿಕೆಗಳನ್ನು ಕೊಡುವುದು ಅಲ್ಲ. ಪ್ರತಿಮಾ ಅವರ ಕೊಲೆಗೆ ಕಾರಣವಾದ ಡ್ರೈವರ್ ಅನ್ನು ಬಂಧಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಿ, ಕರೆ ತಂದಿದ್ದಾರೆ. ಮಹದೇಶ್ವರನೇ ನ್ಯಾಯ ಕೊಟ್ಟ ಎನಿಸುತ್ತದೆ ಎಂದಿದ್ದಾರೆ.
ಪ್ರತಿಮಾ ಕೊಲೆ ಕೇಸಿನಲ್ಲಿ ಕಾಂಗ್ರೆಸ್ ಮುನಿರತ್ನ ಮೇಲೆ ಆರೋಪ ಮಾಡಿದೆ. ಹಣಸೆಮಾರನಹಳ್ಳಿಯ ಪರವಾನಗಿ ಪಡೆಯದೆ ಬಂಡೆಗಳನ್ನು ಬ್ಲಾಸ್ಟ್ ಮಾಡಲಾಗಿತ್ತು. ಪ್ರತಿಮಾ ಅವರು ಈ ಸಂಬಂಧ ವರದಿಯನ್ನು ಜಿಲ್ಲಾಧಿಅಕರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು A2 ಆರೋಪಿಯಾಗಿ ಮಾಡಿದ್ದರು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಸಂಬಂಧ ಮುನಿರತ್ನಗೂ ನೋಟೀಸ್ ನೀಡಿ, ವಿಚಾರಣೆ ನಡೆಸಿ ಎಂಬುದು ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಖುಂದರಾಜ್ ಒತ್ತಾಯಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











