ಚಂಡಿಗಢ: ಪಂಜಾಬ್ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾನನ್ನು ಹತ್ಯೆ ಮಾಡಲಾಗಿದೆ. ಮೂಸಾ ಗ್ರಾಮದಲ್ಲಿರುವ ಕೃಷಿ ಭೂಮಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಈ ವೇಳೆ ನೂತನವಾಗಿ ರಚನೆಯಾಗಿರುವ ಆಪ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಮೂಸೆವಾಲಾ ಕೆನಡಾದಲ್ಲಿ ವಿಧ್ಯಾಭ್ಯಾಸ ಮಾಡಿದ್ದಾರೆ. ಹೀಗಾಗಿ ಅಲ್ಲಿಯೂ ಅಭಿಮಾನಿ ಬಳಗವಿದೆ. ಅವರ ಮೃತದೇಹವನ್ನು ಪೊಲೀಸ್ ಬಂದೋಬಸ್ತ್ ಮೂಲಕ ಗ್ರಾಮಕ್ಕೆ ತರಲಾಯಿತು. ಬಳಿಕ ಮನೆ ಬಾಗಿಲು ಹಾಕಿ ಪೊಲೀಸರ ಕಾವಲು ಹಾಕಲಾಗಿತ್ತು. ಕುಟುಂಬಸ್ಥರು ಮತ್ತು ಆತ್ಮೀಯ ಗೆಳೆಯರಿಗಷ್ಟೇ ಅವಕಾಶ ನೀಡಲಾಗಿತ್ತು.
ಅಂತ್ಯಸಂಸ್ಕಾರಕ್ಕಾಗಿ ಸಾವಿರಾರು ಜನ ಆ ಜಾಗದಲ್ಲಿ ಕಾಯುತ್ತಿದ್ದರು. ಈ ವೇಳೆ ಒಂಜಾಬ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರ್ಕಾರವನ್ನೆ ವಜಾ ಮಾಡಬೇಕೆಂಬ ಆಗ್ರಹಗಳು ಕೇಳಿಬಂದವು. ಸದ್ಯಕ್ಕೆ ಸಿಧು ಅಂತ್ಯಕ್ರಿಯೆ ನಡೆದಿದ್ದು, ಅವರ ಕೊಲೆ ಹೊಣೆಯನ್ನು ಹಲವರು ಹೊತ್ತಿಕೊಂಡಿದ್ದಾರೆ.
ಇತ್ತೀಚೆಗೆ ಪಂಜಾಬ್ ಸರ್ಕಾರ ಹಲವರ ಭದ್ರತೆಯನ್ನು ಹಿಂಪಡೆದಿತ್ತು. ಕಾಕತಾಳೀಯವೆಂಬಂತೆ ಸ್ನೇಹಿತನ ಜೊತೆ ಹೋಗುವಾಗ ಸಿಧು ನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. 25 ಸುತ್ತು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಆತನ ಸ್ನೇಹಿತ ಬದುಕುಳಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.