ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 16 : ನಗರದ ಸ್ಟೇಡಿಯಂ ಮುಂಭಾಗದ ಬುದ್ಧ ಸರ್ಕಲ್ ನಲ್ಲಿ ನಿನ್ನೆ ರಾತ್ರಿ (ಮಾರ್ಚ್. 15, ಭಾನುವಾರ) ಜೋಗಿಮಟ್ಟಿ ರಸ್ತೆ ವಾಸಿ ತಾಜ್‌ಪೀರ್ ನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿ ಸಾಧಿಕ್ ಉಲ್ಲಾನನ್ನು ಚಿತ್ರದುರ್ಗ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ನಗರದ ಹೊರವಲಯದ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಹಿಂಭಾಗ ಗುಡ್ಡದ ಪ್ರದೇಶದಲ್ಲಿ ಮರೆಮಾಚಿಕೊಂಡಿದ್ದ ಆರೋಪಿ ಸಾಧಿಕ್ ಉಲ್ಲಾನನ್ನು ಪತ್ತೆ ಮಾಡಿ ವಿಚಾರಿಸಿದಾಗ, ತನ್ನ ಹೆಂಡತಿ ಶಬಾನಾಳನ್ನು ಪ್ರೀತಿಸಿ ಮದುವೆಯಾಗಿರುತ್ತೇನೆ. ಆದರೆ ಆಕೆಯ ತವರು ಮನೆಯವರು ಹಾಗೂ ಆಕೆಯ ಮಾವನಾದ ತಾಜ್ ಪೀರ್ ನಾನು ಮತ್ತು ನನ್ನ ಹೆಂಡತಿ ಶಬಾನಾಳಿಗೆ ಸಂಸಾರ ಮಾಡಲು ತೊಂದರೆ ಕೊಡುತ್ತಿದ್ದ ಎನ್ನುವ ಕಾರಣಕ್ಕಾಗಿ ದ್ವೇಷದಿಂದ ತಾಜ್ ಪೀರ್ ನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವುದಾಗಿ ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಶ್ಲಾಘಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











