Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಕೊಲೆ : ಆರೋಪಿಗಳ ಮೇಲೆ ಫೈರಿಂಗ್

---Advertisement---

 

ಕೋಲಾರ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ ಶ್ರೀನಿವಾಸ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಲಾರದ ಹೊರವಲಯದಲ್ಲಿ ನಿನ್ನೆ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದರು. ಇಂದು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿಸುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಹೀಗಾಗಿ ಫೈರಿಂಗ್ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಯ ಆರು ಆರೋಪಿಗಳ ಪೈಕಿ ಈಗ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಪ್ರಮುಖ ಆರೋಪಿಯಾಗಿರುವ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿದೆ. ಇನ್ನೊಬ್ಬ ಆರೋಪಿ ಸಂತೋಷ್ ಕಾಲಿಗೂ ಗಾಯವಾಗಿದೆ. ವೇಮಗಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಂದ ಫೈರಿಂಗ್ ನಡೆದಿದೆ.

ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಕರೆತರುತ್ತಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ. ಹೀಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀ ಸಾಗರ ಅರಣ್ಯ ಪ್ರದೇಶದಲ್ಲಿ ಈ ಫೈರಿಂಗ್ ನಡೆದಿದೆ. ಇನ್ಸ್ ಪೆಕ್ಟರ್ ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿ ನಾಗೇಶ್ ಅವರಿಗೂ ಇದರಿಂದ ಗಾಯವಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment