ಕೋಲಾರ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ ಶ್ರೀನಿವಾಸ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಲಾರದ ಹೊರವಲಯದಲ್ಲಿ ನಿನ್ನೆ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದರು. ಇಂದು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿಸುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎನಿಸುತ್ತದೆ. ಹೀಗಾಗಿ ಫೈರಿಂಗ್ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಯ ಆರು ಆರೋಪಿಗಳ ಪೈಕಿ ಈಗ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಪ್ರಮುಖ ಆರೋಪಿಯಾಗಿರುವ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿದೆ. ಇನ್ನೊಬ್ಬ ಆರೋಪಿ ಸಂತೋಷ್ ಕಾಲಿಗೂ ಗಾಯವಾಗಿದೆ. ವೇಮಗಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಂದ ಫೈರಿಂಗ್ ನಡೆದಿದೆ.
ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಕರೆತರುತ್ತಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ. ಹೀಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀ ಸಾಗರ ಅರಣ್ಯ ಪ್ರದೇಶದಲ್ಲಿ ಈ ಫೈರಿಂಗ್ ನಡೆದಿದೆ. ಇನ್ಸ್‌ಪೆಕ್ಟರ್ ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿ ನಾಗೇಶ್ ಅವರಿಗೂ ಇದರಿಂದ ಗಾಯವಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











