Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಗೀತ ಮಾನಸಿಕ ನೆಮ್ಮದಿಯ ಜೊತೆಗೆ ಬಾಂಧವ್ಯ ಗಟ್ಟಿಗೊಳಿಸುತ್ತದೆ: ಆರ್. ವಿಶ್ವಸಾಗರ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 27 : ಸಂಗೀತ ಮಾನಸಿಕ ನೆಮ್ಮದಿ ನೀಡುವುದರ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆಂದು ವಿಮುಕ್ತಿ ವಿದ್ಯಾಸಂಸ್ಥೆಯ ಆರ್.ವಿಶ್ವಸಾಗರ್ ಹೇಳಿದರು.

ಮಠದ ಕುರುಬರಹಟ್ಟಿಯಲ್ಲಿರುವ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಆಯಿತೋಳಿನ ಗಾನಯೋಗಿ ಸಂಗೀತ ಸಾಂಸ್ಕøತಿಕ ಕಲಾ ಸಂಘದ ವತಿಯಿಂದ ಭಾನುವಾರ ನಡೆದ ಸಂಗೀತೋತ್ಸವ ಉದ್ಘಾಟಿಸಿ ಮಾತನಾಡಿದರು.

 

ಇಡಿ ಜಗತ್ತಿನಲ್ಲಿ ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ಏಕೈಕ ಭಾಷೆಯೆಂದರೆ ಸಂಗೀತ. ಸಂಗೀತಕ್ಕೆ ತಲೆದೂಗದವರಲ್ಲಿ ಎಂದು ತಿಳಿಸಿದರು.
ಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಗೀತ ನಮ್ಮ ನೆಲದ ಸಂಸ್ಕøತಿಯ ಪ್ರತೀಕವಾಗಿದ್ದು, ಶಾಸ್ತ್ರೀಯ ಸಂಗೀತ,
ವಚನ ಸಂಗೀತ, ಜಾನಪದ, ತತ್ವಪದ, ರಂಗಗೀತೆಗಳು ಗೀಗಿ ಪದ, ಲಾವಣಿಗಳು ಸೇರಿದಂತೆ ಮುಂತಾದ ಕಲಾ ಪ್ರಕಾರಗಳನ್ನು ಆಸ್ವಾದಿಸಿ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಿ ಬೆಳೆಸಬೇಕೆಂದು ಕರೆ ನೀಡಿದರು.
ಕಲಾ ಸಂಘದ ಅಧ್ಯಕ್ಷ ಆಯಿತೋಳು ಚಂದ್ರಪ್ಪ ಮಾತನಾಡಿ ಸಂಗೀತವು ಭಾರತೀಯ ಪರಂಪರೆಯ ಹೆಮ್ಮೆ. ಪ್ರತಿಯೊಬ್ಬರು ಸಂಗೀತ ಕಲೆಯನ್ನು ಗೌರವಿಸುವ ಗುಣ ಹೊಂದಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ಯುವ ಜನಾಂಗ ಪಾಶ್ಚಾತ್ಯ ಸಂಸ್ಕøತಿಯ ಕಡೆ ಮಾರು ಹೋಗುತ್ತಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

 

ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ.ಶಂಕರಪ್ಪ, ಗಾನಯೋಗಿ ಕಲಾ ಸಂಘದ ಕಾರ್ಯದರ್ಶಿ ಜಗದೀಶ್ ಆಯಿತೋಳು, ಗಾಯಕರುಗಳಾದ ಅಂಜಿನಪ್ಪ, ಹೇಮಂತ್‍ರಾಜ್, ಅಮಕುಂದಿ ಕೆ.ಗಂಗಾಧರ್, ಗಾಯಕಿ ಭಾಗ್ಯಮ್ಮ ಕೆ.ಹೆಚ್. ನಿಲಯ ಪಾಲಕ ಮಹಾದೇವಪ್ಪ, ಶಾಂತಮ್ಮ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now