Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಈದ್ಗಾ ಮೈದಾನದಲ್ಲಿ ಮಳೆಗಾಗಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆಯಾಗದೆ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಜನ-ಜಾನುವಾರುಗಳು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಡಿಗೆ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಿ ಇಂದು ಚಿತ್ರದುರ್ಗ ನಗರದ ಸುನ್ನಿ ಬಡಾ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಮಧ್ಯಾಹ್ನ 2:30ಕ್ಕೆ ಸಾಮೂಹಿಕ ನಮಾಜ್ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಜಾಮಿಯಾ ಮಸೀದಿಯ ಅಧ್ಯಕ್ಷರಾದ ಸಾದಿಕ್, ಕಾರ್ಯದರ್ಶಿ ಮಾಹಿಬ್ ವುಲ್ಲಾ ಹಾಗೂ ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಈ ಪ್ರಾರ್ಥನೆ ಜರುಗಿತು. ನಮಾಜ್ನ ನೇತೃತ್ವ ವಹಿಸಿದ್ದ ಧರ್ಮಗುರುಗಳು, ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿ ಕೆರೆ-ಕಟ್ಟೆಗಳು ಭರ್ತಿಯಾಗಲಿ ಮತ್ತು ರೈತರ ಕಷ್ಟಗಳು ದೂರವಾಗಲಿ ಎಂದು ಅಲ್ಲಾಹನಲ್ಲಿ ಮೊರೆಹೋದರು. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು, ಯುವಕರು ಹಾಗೂ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಂಡು ಸಾಮೂಹಿಕವಾಗಿ ದುವಾ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now