Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು : ವೈರಲ್ ಆದ ಬಳಿಕ ಶಾಸಕ ಸಂಗಮೇಶ್ ಕಡೆಯಿಂದ ಕ್ಲಾರಿಟಿ

---Advertisement---

ಶಿವಮೊಗ್ಗ: ನಿನ್ನೆಯಷ್ಟೇ ಭದ್ರಾವತಿ ಶಾಸಕ ಸಂಗಮೇಶ್ ಅವರ ಹೇಳಿಕೆಯೊಂದು ವೈರಲ್ ಆಗಿತ್ತು. ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಬೇಕು ಎಂದು ಹೇಳಿದ್ದ ಮಾತದು. ಈ ಹೇಳಿಕೆಗೆ ಸಾಕಷ್ಟು ವಿರೋಧ ಕೂಡ ಎದುರಾಗಿತ್ತು. ಇದೀಗ ಆ ಹೇಳಿಕೆ ಸಂಬಂಧ ಶಾಸಕ ಸಂಗಮೇಶ್ ಅವರೇ ಕ್ಲಾರಿಟಿಯನ್ನ ನೀಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲಾ‌ಧರ್ಮ ಒಂದೇ. ಎಲ್ಲರೂ ಪ್ರೀತಿ ವಿಶ್ವಾಸದಿಂದ ಹೋಗಬೇಕು. ಯಾವುದೇ ಗಲಾಟೆ, ಗದ್ದಲ ಆಗಬಾರದು, ಎಲ್ಲರನ್ನು ಪ್ರೀತಿಯಿಂದ ನೋಡಬೇಕು. ಭದ್ರಾವತಿ ಅಭಿವೃದ್ಧಿಯಾಗಬೇಕು. ಅದಕ್ಕೆ ಎಲ್ಲರೂ ಸಹಕಾರ ಮಾಡಬೇಕು. ನನ್ನ ಹೇಳಿಕೆಯನ್ನ ತಿರುಚಲಾಗಿದೆ ಎಂದಿದ್ದಾರೆ.

ಭದ್ರಾವತಿಯಲ್ಲಿ ಅಶಾಂತಿಗೆ ಬಿಜೆಪಿ, ಜೆಡಿಎಸ್‌ ಹುನ್ನಾರ ನಡೆಸಿದೆ. ಕಾಂಗ್ರೆಸ್‌ನವರು ನಿಜವಾದ ಹಿಂದೂಗಳು. ಬಿಜೆಪಿಯದ್ದು ಬೂಟಾಟಿಕೆ ಹಿಂದುತ್ವ. ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಬೂಟ್‌ನಿಂದ ಒದ್ದು ಒಳಗೆಹಾಕಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.

 

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿರುವ ಸಂಗಮೇಶ್ ಅವರು, ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ ಅಂದ್ರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ಮುಂದಿನ ದಿನಗಳಲ್ಲಿ ಪುತ್ರ ಗಣೇಶನ ಮೇಲೆ ನಿಮ್ಮ ಆಶೀರ್ವಾದ ಇರಲಿ. ನಿಮ್ಮ ಮನೆಯ ಮಗನಾಗಿ ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕು ಅಂತ ಬಯಸ್ತೀನಿ. ಈ ಕಾರ್ಯಕ್ರಮಕ್ಕೆ ಬಹಳ ಪ್ರೀತಿಯಿಂದ ಕರೆಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದರು. ಈ ಹೇಳಿಕೆಗಳಿಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now