ಜನರ ಸೇವೆಗಾಗಿಯೇ ನನ್ನ ಅಧಿಕಾರ ಮುಡುಪು : ಶಾಸಕ ಎಂ.ಚಂದ್ರಪ್ಪ

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ನ.01): ರಾಷ್ಟ್ರನಾಯಕ ದಿವಂಗತ ಎಸ್.ನಿಜಲಿಂಗಪ್ಪ ಕರ್ನಾಟಕದ ಏಕೀಕರಣಕ್ಕಾಗಿ ದೊಡ್ಡ ಹೋರಾಟ ಮಾಡಿ ಕನ್ನಡ ನಾಡಿಗೆ ಗೌರವ ತಂದು ಕೊಟ್ಟಿದ್ದರಿಂದ ಇಂದು ನಾವುಗಳೆಲ್ಲಾ 67 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದೇವೆಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹರ್ಷ ವ್ಯಕ್ತಪಡಿಸಿದರು.

ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆ ವತಿಯಿಂದ ಮಂಗಳವಾರ ಆಚರಿಸಲಾದ 67 ನೇ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ಫೋಟೋಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಹರಿಕಾರ ಎನಿಸಿಕೊಂಡಿದ್ದ ದಿವಂಗತ ಡಿ.ದೇವರಾಜ್ ಅರಸ್‍ರವರು ಮೈಸೂರು ರಾಜ್ಯವನ್ನು ಕರ್ನಾಟಕವೆಂದು ನಾಮಕರಣ ಮಾಡಿದರು. ಹಲವಾರು ಮಹನೀಯರು ಸೇರಿ ಕಟ್ಟಿರುವ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವುದು ನಮ್ಮೆಲ್ಲರ ಭಾಗ್ಯ. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪವರ್ ಸ್ಟಾರ್ ಪುನಿತ್‍ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿರುವುದು ನನಗಂತೂ ಅತ್ಯಂತ ಖುಷಿ ತಂದಿದೆ.

ಅಧಿಕಾರ ಯಾರಿಗೂ ಶಾಶ್ವತವಲ್ಲ. ಜನಪ್ರತಿನಿಧಿಗಳು ಚಿಕ್ಕವರಾಗಿರಲಿ, ದೊಡ್ಡವರಾಗಿರಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ಕೊಡುವುದು ಅಧಿಕಾರಿಗಳ ಕರ್ತವ್ಯ. ಸಣ್ಣಪುಟ್ಟ ಲೋಪಗಳಾಗಿದೆ. ಇನ್ನು ಮುಂದೆ ಇಂತಹ ತಪ್ಪುಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲರೂ ಈ ಮಣ್ಣಿನಲ್ಲಿ ಹುಟ್ಟಿರುವವರು. ರಾಜಕೀಯ ಮುಖ್ಯವಲ್ಲ. ಕ್ಷೇತ್ರದ ಜನರ ಹಿತಕಾಯಬೇಕೆನ್ನುವುದನ್ನು ಅರ್ಥಮಾಡಿಕೊಂಡು ಮತದಾರರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಯಾವುದೇ ರಾಜಕೀಯ ಮಾಡದೆ ಜನಸಾಮಾನ್ಯರ ಜೊತೆ ಬೆರೆತು ಜನ ಮೆಚ್ಚುವ ರೀತಿಯಲ್ಲಿ ಅತ್ಯುತ್ತಮವಾದ ಅಭಿವೃದ್ದಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇನೆ. ಹೊಳಲ್ಕೆರೆ ಕ್ಷೇತ್ರದಿಂದ ಗೆದ್ದು ಶಾಸಕನಾದಾಗ ಪಟ್ಟಣ ಹಳ್ಳಿಯಂತೆ ಇತ್ತು. ಉತ್ತಮ ರಸ್ತೆ, ಆಸ್ಪತ್ರೆ, ಕೆ.ಎಸ್.ಆರ್.ಟಿ.ಸಿ.ಬಸ್‍ನಿಲ್ದಾಣ, ಎ.ಪಿ.ಎಂ.ಸಿ.ಮಾರ್ಕೆಟ್, ಕಂದಾಯ ಭವನ, ಪಿ.ಯು.ಹಾಗೂ ಪ್ರಥಮ ದರ್ಜೆ ಕಾಲೇಜು ಕಟ್ಟಿಸಿ ಕಾಯಕಲ್ಪ ನೀಡಿದ್ದರಿಂದ ಈಗ ನೋಡಲು ಹೊಳಲ್ಕೆರೆ ಸುಂದರವಾಗಿ ಕಾಣುತ್ತಿದೆ.

28 ವರ್ಷಗಳ ಹಿಂದೆ ಭರಮಸಾಗರ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕನಾದಾಗ 386 ಹಳ್ಳಿಗಳಲ್ಲಿಯೂ ಕಾಂಕ್ರಿಟ್ ರಸ್ತೆ ಮಾಡಿಸಿದ್ದರಿಂದ ರಸ್ತೆರಾಜ ಎನ್ನುವ ಬಿರುದು ಕೊಟ್ಟು ಜನ ಎರಡನೆ ಬಾರಿಗೂ ನನ್ನನ್ನು ಗೆಲ್ಲಿಸಿದರು. ಅದಕ್ಕಾಗಿ ಜನರ ಸೇವೆಗಾಗಿಯೇ ನನ್ನ ಅಧಿಕಾರವನ್ನು ಮುಡುಪಾಗಿಡುತ್ತೇನೆಂದು ಜನತೆಗೆ ಆಶ್ವಾಸನೆ ನೀಡಿದರು.

ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳನ್ನು ಅಭಿವೃದ್ದಿಪಡಿಸಿ ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆ. ಗಣಪತಿ ದೇವಸ್ಥಾನಕ್ಕೆ ಹೋಗುವ ರಸ್ತೆ ಅಗಲೀಕರಣವಾಗಿಸಿದ್ದರಿಂದ ಸಂಚಾರ ದಟ್ಟಣೆ ಇಲ್ಲದಂತಾಗಿದೆ. ಊರಿನ ಗಲೀಜೆಲ್ಲಾ ಸೇರುತ್ತಿದ್ದ ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿನ ಕೆರೆಯನ್ನು ಸ್ವಚ್ಚಗೊಳಿಸಿದ್ದೇನೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಆರ್.ಎ.ಅಶೋಕ್, ಉಪಾಧ್ಯಕ್ಷ ಕೆ.ಸಿ.ರಮೇಶ್, ಸರ್ಕಾರಿ ನೌಕರರ ಸಂಘದ ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಲೋಕೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ, ಹೊಳಲ್ಕೆರೆ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಪಿ.ಹನುಮಂತಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಕುಬೇರಪ್ಪ, ತಹಶೀಲ್ದಾರ್ ಶ್ರೀಮತಿ ರೇಖಾ ಟಿ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಂಜನ್‍ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ವಿವಿಧ ಕನ್ನಡಪರ ಸಂಘಟನೆಗಳು ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

suddionenews

Recent Posts

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

3 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

15 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

6 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

6 hours ago