ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ, ಕ್ಷೇತ್ರದ ಎಲ್ಲಾ ಹಳ್ಳಿಗಳನ್ನು ಸುತ್ತಿ ಅಭಿವೃದ್ಧಿಯ ಒಂದು ಭಾಗವನ್ನು ರೂಪಿಸುವೆ ಎಂದು ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ತಿಳಿಸಿದರು.
ತಾಲೂಕಿನ ಸೊಲ್ಲಾಪುರ ನಾಯಕರಹಟ್ಟಿ ಹಾಗೂ ಉಪ್ಪಾನಾಯಕನಹಳ್ಳಿ ಗ್ರಾಮಗಳಲ್ಲಿ ಬುಧುವಾರ ಜಲಜೀವನ್ ಮಿಷನ್ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು, ಕ್ಷೇತ್ರದ ಜನರು ನನ್ನನ್ನು ಮತಗಳನ್ನ ನೀಡುವುದರ ಮೂಲಕ ಚುನಾಯಿತ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ, ಅವರ ಕಾಳಜಿಗೆ ನನ್ನ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನಹರಿಸುವೆ, ಯಾರು ಏನೇ ನನ್ನ ಬಗ್ಗೆ ಅಪಪ್ರಚಾರ ಮಾಡಿದರು ಕೂಡ ತಲೆಕೆಡಿಸಿಕೊಳ್ಳದೆ ಅಭಿವೃದ್ಧಿಯ ಕಡೆಗೆ ಹೆಜ್ಜೆ ಇಡುವೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರಗಳಲ್ಲಿ ಯಾವ ರಾಜಕಾರಣಗಳನ್ನು ಮಾಡದೆ ಎಲ್ಲರೂ ನಮ್ಮವರೇ ಎನ್ನುವ ಮನೋಭಾವನೆಯಲ್ಲಿ ಬದುಕುತ್ತಿರುವವನು ನಾನು, ರಾಜಕಾರಣ ಶಾಶ್ವತವಲ್ಲ ಅಭಿವೃದ್ಧಿ ಕಾರ್ಯಗಳೇ ಶಾಶ್ವತ ಹಾಗಾಗಿ ಕ್ಷೇತ್ರದ ವಿವಿಧ ಗ್ರಾಮಗಳ ಕುಂದು ಕೊರತೆಗಳನ್ನು ಪಟ್ಟಿಮಾಡಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆಯನ್ನು ನೆರೆವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಮಹಿಳೆಯರು ಸ್ವಯಂ ಉದ್ಯೋಗ ಮಾಡಲು ಸಾಕಷ್ಟು ಸರ್ಕಾರದ ಯೋಜನೆಗಳು ಜಾರಿ ಇವೆ ಅಂತಹ ಯೋಜನೆಗಳನ್ನು ಮಹಿಳೆಯರು ಬಳಸಿಕೊಂಡು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸೊಲ್ಲಾಪುರ ನಾಯಕರಹಟ್ಟಿ ಸಾರ್ವಜನಿಕರಿಗೆ ಹಕ್ಕು ಪತ್ರಗಳ ವಿತರಣ ಕಾರ್ಯಕ್ರಮವನ್ನು ಸಚಿವರ ಸಮ್ಮುಖದಲ್ಲಿ ವಿತರಣೆಯನ್ನು ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶಿವಣ್ಣ, ಕೆಡಿಪಿ ಸದಸ್ಯರಾದ ಸಂತೋಷ್, ನಾಗರಾಜ್, ಜಾನುಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾಸ್ವಾಮಿ, ಗ್ರಾಮ ಪಂಚಾಯತಿ ಸದಸ್ಯರಾದ ನಿಜಲಿಂಗಪ್ಪ, ವೆಂಕಟಚಲ, ಚಿಂತಾಮಣಿ, ಅಂಜಿನಿ ಹಾಗೂ ಗ್ರಾಮಸ್ಥರಾದ ಹನುಮಂತಪ್ಪ, ಶಶಿಕುಮಾರ್, ರಮೇಶ್, ಮಯೂರ್, ಸ್ವಾಮಿ, ರಂಗಪ್ಪ, ಲೋಕೇಶ್, ಕುಮಾರ್, ಸ್ವಾಮಿ ಹಾಗೂ ಇತರರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್