ಮಂಡ್ಯ: 2028ರ ಚುನಾವಣೆಗೆ ಪಕ್ಷಗಳು ಈಗಿಂದಲೇ ಒಂದಷ್ಟು ಪ್ಲ್ಯಾನ್ ಗಳನ್ನ ಮಾಡಿಕೊಳ್ತಿವೆ. ಅದರಲ್ಲೂ ಬಿಜೆಪಿಯಲ್ಲಿ ಜೆಡಿಎಸ್ ಕೂಡ ಮಿಕ್ಸ್ ಆಗಿದೆ. ಹೀಗಾಗಿ ಸಿಎಂ ಸ್ಥಾನದ ಆಕಾಂಕ್ಷಿ ಕುಮಾರಸ್ವಾಮಿ ಅವರು ಕೂಡ ಆಗಿರ್ತಾರೆ. ಇನ್ನು ಬಿಜೆಪಿಯಲ್ಲೂ ಸಿಎಂ ಆಕಾಂಕ್ಷಿಗಳು ಸಾಕಷ್ಟು ಜನ ಇದ್ದಾರೆ. ಇದೇ ವಿಚಾರಕ್ಕೆ ಇಂದು ವಿಪಕ್ಷ ನಾಯಕ ಆರ್ ಅಶೋಕ್ ಮಾತನ್ನಾಡಿದ್ದಾರೆ. ನಾಳೆ ಪ್ರಧಾನಿ ಮೋದಿ ಅವರು ಆದಿ ಚುಂಚನಗಿರಿಗೆ ಬರ್ತಾ ಇರೋ ಕಾರಣ ಅಲ್ಲಿನ ಸಿದ್ಧತೆಗಳನ್ನ ನೋಡೋದಕ್ಕೆ ಹೋಗಿದ್ದರು. ಈ ವೇಳೆ ಆ ಬಗ್ಗೆ ಮಾತನ್ನಾಡಿದ್ದಾರೆ.
2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ವಿನಃ ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ. ನಮ್ಮಲ್ಲೂ ಮುಖ್ಯಮಂತ್ರಿ ಆಕಾಂಕ್ಷಿಗಳು ತುಂಬಾ ಜನರಿದ್ದಾರೆ. 2028ಕ್ಕೆ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ.
ಸಂಸತ್ತಿನಲ್ಲೂ ಜೆಡಿಎಸ್ ಗೆ ಮೂರ್ನಾಲ್ಕು ಸ್ಥಾನಗಳನ್ನ ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮೈತ್ರಿ ಮುಂದುವರೆಯಲಿದೆ. ಸಿಎಂ ಯಾರಾಗಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ನಿತಿನ್ ನಬೀನ್ ನಿರ್ಧಾರ ಮಾಡ್ತಾರೆ. ನನ್ನನ್ನೂ ಸೇರಿದಂತೆ ಈಗಾಗಲೇ 10 ಮಂದೊಯ ಹೆಸರುಗಳು ಕೇಳಿ ಬಂದಿದೆ. ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯ. ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರ್ಕಾರ ತೊಲಗುವುದು ಅಷ್ಟೇ ಮುಖ್ಯ ಎಂಬ ಮಾತನ್ನ ಆರ್ ಅಶೋಕ್ ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







