Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭವಾನಿ ರೇವಣ್ಣ ಅವರಿಗೆ ಹಾಸನ ಬಿಟ್ಟು ಮೈಸೂರು ಜಿಲ್ಲೆಯ ಟಿಕೆಟ್ : ಒಪ್ತಾರಾ ದೊಡ್ಡಗೌಡ್ರ ಸೊಸೆ..?

---Advertisement---

 

ಹಾಸನ: ಜೆಡಿಎಸ್ ಕುಟುಂಬದಲ್ಲಿ ಹಾಸನ ಟಿಕೆಟ್ ಗದ್ದಲ ಮುಗಿಯುವಂತೆ ಕಾಣುತ್ತಿಲ್ಲ. ಮೊದ‌ ಮೊದಲಿಗೇನೆ ಭವಾನಿ ರೇವಣ್ಣ, ಈ ಬಾರಿ ಹಾಸನದಲ್ಲಿ ನಾನೇ ಸ್ಪರ್ಧಿಸುತ್ತಿದ್ದೇನೆ. ನನಗೆ ಟಿಕೆಟ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಿಕೊಂಡಿದ್ದರು. ಅದಾದ ಬಳಿಕ ಕುಟುಂಬದಲ್ಲಿಯೇ ಒಂದಷ್ಟು ಗೊಂದಲ ಮೂಡಿತ್ತು. ದೇವೇಗೌಡರ ಅಂಗಳದಲ್ಲಿ ಚೆಂಡು ಇತ್ತು. ಆದರೆ ಕುಮಾರಸ್ವಾಮಿ ಇದಕ್ಕೆ ಸುತಾರಾಮ್ ಒಪ್ಪಿಗೆ ನೀಡಿರಲಿಲ್ಲ.

ಇದೀಗ ದೊಡ್ಡಗೌಡರಿಂದ ದೊಡ್ಡ ಸೊಸೆಗೆ ಸಲಹೆಯೊಂದು ಸಿಕ್ಕಿದೆಯಂತೆ. ಹಾಸನ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಟಿಕೆಟ್ ನೀಡಲು ಗೌಡ್ರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದಿಂದ ನಿಲ್ಲಲು ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಭವಾನಿ ರೇವಣ್ಣ ಅವರು ಒಪ್ಪಿಕೊಳ್ಳುತ್ತಾರಾ ಎಂಬ ಕುತೂಹಲವಿದೆ.

ಈ ಬಗ್ಗೆ ಕುಮಾರಸ್ವಾಮಿ ಅವರನ್ನ ಕೇಳಿದ್ರೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಬೇಕೆಂದು ನಿರ್ಧರಿಸಿದ್ದಾರೆ. ಹೀಗಾಗಿ ಭವಾನಿ ರೇವಣ್ಣ ಅವರಿಗೆ ಸಮಾಧಾನ ಮಾಡಿ, ಚಾಮರಾಜ ಕ್ಷೇತ್ರಕ್ಕೆ ಫಿಕ್ಸ್ ಮಾಡುತ್ತಾರಾ ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment