ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

suddionenews
1 Min Read

 

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ ಕಾರ್ಯಕ್ರಮ ಹೇಗೆಲ್ಲಾ ನಡೆಯಲಿದೆ ಎಂಬುದರ ಕುರಿತು ಜಿಲ್ಲಾಡಳಿತ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್ 3 ರಂದು ಕಾರ್ಯಕ್ರಮ ಶುರುವಾಗಲಿದೆ‌. ಚಾಮುಂಡಿ ಬೆಟ್ಟದಲ್ಲಿ ಅಂದು ಬೆಳಗ್ಗೆ 9.15ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾಗೆ ಚಾಲನೆ ಸಿಗಲಿದೆ. ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ. ಇನ್ನು ಅಕ್ಟೋಬರ್ 3 ರಿಂದ 11ರ ವರೆಗೂ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ‌.

ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ‌ಧ್ವಜ ಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಅಂದು ಸಂಜೆ 7 ಗಂಟೆಗೆ ಬನ್ನಿ ಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ಅನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.

ಈಗಾಗಲೇ ಯುವ ದಸರಾ ಕಾರ್ಯಕ್ರಮ ನಡೆಯುತ್ತಿದ್ದು, ಪ್ರತಿದಿನ ಸಂಜೆ 5 ಗಂಟೆಗೆ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ. ಈ ಬಾರಿಯ ದಸರಾವನ್ನು ಅದ್ದೂರಿಯಾಗಿ‌ ನಡೆಸಲು ಈಗಾಗಲೇ ಸರ್ಕಾರ ಪ್ಲ್ಯಾನ್ ಹಾಕಿಕೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *