ಅಕ್ಟೋಬರ್ 03 ರಿಂದ 11 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

1 Min Read

ಚಿತ್ರದುರ್ಗ. ಸೆ.24. ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಜಗತ್ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ ಅ.03 ರಿಂದ 11 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024” ವನ್ನು ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿಸಿ ಕಚೇರಿ ಎದುರು ಏರ್ಪಡಿಸಲಾಗಿದೆ.

ಈ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿಗಳ ಹೆಸರಿನಲ್ಲಿ ರೂ.1000 ಗಳನ್ನು ಭದ್ರತಾ ಠೇವಣಿ ಸಲ್ಲಿಸಬೇಕು. ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು ಕಚೇರಿ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್  https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಇದೇ ಸೆ.30ರ ಸಂಜೆ 5 ಗಂಟೆಯೊಳಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು ಇವರ ಹೆಸರಿಗೆ ಅಂಚೆ ಹಾಗೂ ಇ-ಮೇಲ್  kannadapradhikara@gmail.com
ಮೂಲಕ ಸಲ್ಲಿಸಲು ಸೂಚಿಸಿದೆ. ನಿರ್ಮಿಸಲಾಗಿರುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ ಬೆಂಗಳೂರು, ದೂರವಾಣಿ ಸಂಖ್ಯೆ: 080-22484516, 080-22107704 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *