Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನಲ್ಲಿ 19 ರಾಷ್ಟ್ರಪಕ್ಷಿಗಳ ನಿಗೂಢ ಸಾವು : ತನಿಖೆಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ

---Advertisement---

ತುಮಕೂರು, ಆಗಸ್ಟ್. 04 : ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದ್ದು ಇದು ಸಾಮೂಹಿಕ ಹತ್ಯೆಯೋ, ನಿಗೂಢ ಸಾವೋ ಎಂದು ಸರ್ಕಾರ ತನಿಖೆ ನಡೆಸಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ವಕೀಲರಾದ ಮಾಲತೇಶ್ ಅರಸ್ ಹರ್ತಿಕೋಟೆ ಒತ್ತಾಯಿಸಿದ್ದಾರೆ.

14 ಹೆಣ್ಣು ನವಿಲುಗಳು ಸೇರಿ 19 ನವಿಲುಗಳ ಮೃತದೇಹ ಪತ್ತೆ ಆಗಿದ್ದು, ಬೆಳಗ್ಗೆ ರೈತರು ಜಮೀನಿಗೆ ಹೋಗಿದ್ದಾಗ ನವಿಲಿನ ಮೃತದೇಹ ಪತ್ತೆಯಾಗಿದೆ. ಕ್ರಿಮಿನಾಶಕ ಸಿಂಪಡಿಸಿರುವ ಬೆಳೆಗಳನ್ನು ಸೇವಿಸಿ ನವಿಲು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರು ಎಫ್ ಎಸ್ ಎಲ್ ತನಿಖೆಯಿಂದ ಸಾವಿಗೆ ಕಾರಣ ತಿಳಿದು ಬರಲಿದೆ ಕೂಡಲೇ ತನಿಖೆ ಮಾಡಿ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ವಕೀಲರಾದ ಮಾಲತೇಶ್ ಅರಸ್ ಹರ್ತಿಕೋಟೆ, ಪ್ರಧಾನ ಕಾರ್ಯದರ್ಶಿ ಟಿ.ರುದ್ರಮುನಿ
ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಇತ್ತೀಚೆಗೆ ಹಲವಾರು ವನ್ಯಜೀವಿಗಳ ಅಸಹಜ ಸಾವುಗಳ ಬಳಿಕ ಈ ಘಟನೆ ನಡೆದಿದ್ದು, ರಾಜ್ಯದ ಜೀವವೈವಿಧ್ಯಕ್ಕೆ ಹೆಚ್ಚುತ್ತಿರುವ ಬೆದರಿಕೆಗಳನ್ನು ಇದು ಎತ್ತಿ ತೋರಿಸುತ್ತದೆ. ಮಲೈ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ, ಜುಲೈ 2 ರಂದು, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳಿಗೆ ವಿಷಪ್ರಾಶನ, ಜೂನ್‌ನಲ್ಲಿ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಒಂದು ಹುಲಿ ಮತ್ತು ಅದರ ನಾಲ್ಕು ಮರಿಗಳ ಹಠಾತ್ ಸಾವು ಸಂರಕ್ಷಣಾ ವಲಯಗಳಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದೆ.

ಕರ್ನಾಟಕದಲ್ಲಿರುವ ಶ್ರೀಮಂತ ಜೀವವೈವಿಧ್ಯತೆಯನ್ನು ಕಾಪಾಡಲು ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ಈ ಘಟನೆಗಳ ತನಿಖೆಯನ್ನು ತೀವ್ರಗೊಳಿಸುತ್ತಿದ್ದಾರೆ. ಈ ಕೃತ್ಯ ಪರಿಣಾಮಕಾರಿಯಾಗಿ ನಿಭಾಯಿಸಲು ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಬಲಪಡಿಸಲು ಮತ್ತು ಅರಣ್ಯ ಇಲಾಖೆಗಳಿಗೆ ಸಂಪನ್ಮೂಲಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರವನ್ನು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ವಕೀಲರಾದ ಮಾಲತೇಶ್ ಅರಸ್ ಹರ್ತಿಕೋಟೆ ಒತ್ತಾಯಿಸಿದ್ದಾರೆ. ( 9480472030)

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...