ಧಾರವಾಡ ನಗರದ ಹೊರವಲಯದಲ್ಲಿ ಟಿಬೆಟಿಯನ್ ಮೂಲದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಹಳಿಯಾಳ ರಸ್ತೆಯಲ್ಲಿ ತಾಶಿ ಧೋಂಡು (39) ಎಂಬ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕವಾಗಿ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು.ರಸ್ತೆ ಪಕ್ಕದಲ್ಲಿ ಶವ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮೊದಲಿಗೆ ರಸ್ತೆ ಅಪಘಾತವೆಂದು ಭಾವಿಸಿದ್ದರು. ಆದರೆ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪರಿಶೀಲನೆ ನಡೆಸಿದ ಬಳಿಕ ಇದು ಕೊಲೆ ಪ್ರಕರಣ ಎಂದು ದೃಢಪಟ್ಟಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ನಿವಾಸಿಯಾಗಿದ್ದ ತಾಶಿ ಧೋಂಡು ಅವರನ್ನು ಬೇರೆಡೆ ಕೊಲೆ ಮಾಡಿ, ನಂತರ ಧಾರವಾಡ ಹೊರವಲಯದ ಹಳಿಯಾಳ ರಸ್ತೆಗೆ ಶವವನ್ನು ತಂದು ಎಸೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.
ಕೊಲೆಯ ಹಿಂದಿನ ಉದ್ದೇಶ ಏನು? ಇದರಲ್ಲಿ ಭಾಗಿಯಾಗಿರುವವರು ಯಾರು? ಮೃತ ಸನ್ಯಾಸಿಯ ಹಿನ್ನೆಲೆ ಏನು? ಎಂಬ ಹಲವು ಪ್ರಶ್ನೆಗಳ ಉತ್ತರ ಹುಡುಕಲು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











