ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಿಗೂಢ ವಸ್ತು ಸ್ಪೋಟ..!

1 Min Read

 

 

ಶಿವಮೊಗ್ಗ: ಜಿಲ್ಲೆಯಲ್ಲಿ ನಿಗೂಢ ವಸ್ತು ಸ್ಪೋಟಗೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಫುಟ್ ಪಾತ್ ನಲ್ಲಿ ಬ್ಯಾಗ್ ನಲ್ಲಿ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ಘಟನೆಯಿಂದ ಬಸ್ ನಿಲ್ದಾಣದಲ್ಲಿದ್ದ ಜನ ಆತಂಕಕ್ಕೆ ಒಳಗಾಗಿದ್ದರು.

ತಕ್ಷಣ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಹಂದಿ ಶಿಕಾರಿಗೆ ಬಳಸುವ ನಾಡಾ‌ ಬಾಂಬ್ ಸ್ಪೋಟಕ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಬ್ಲಾಸ್ಟ್‌ನ ತೀವ್ರತೆಯಿಂದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿರಾಳಕೊಪ್ಪ ಠಾಣೆಯ ಪೊಲೀಸರು ಘಟನೆಗೆ ಸಂಬಂಧಿಸಿದದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ. ಈ ಘಟನೆಯಿಂದ ಬಸ್ ನಿಲ್ದಾಣದಲ್ಲಿ ಜನ ಗಾಬರಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *