Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ನಿವಾಸಕ್ಕೆ‌ ಹರಿದ್ವಾರದ ನಾಗಸಾಧುಗಳ ಭೇಟಿ..!

---Advertisement---

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿಜೆ ಶಿವಕುಮಾರ್ ಅವರು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿಯೇ ಈಗ ದೇವರ ಮೊರೆ ಹೋಗಿದ್ದಾರೆ. ಕಳೆದ ಕೆಲವು ದಿನಗಳಿಂದ ಟೆಂಪಲ್ ರನ್ ಕೂಡ ಮಾಡ್ತಾ ಇದ್ದಾರೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರ ನಾಗಸಾಧುಗಳು ಬಂದಿದ್ದು, ಆಶೀರ್ವಾದವನ್ನು ಕೂಡ ಮಾಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಸಾಧುಗಳು ಡಿಜೆಶಿ ಅವರಿಗೆ ಆಶೀರ್ವಾದ ಮಾಡಿದ್ದಾರೆ.

ನಾಗ ಸಾಧುಗಳ ಲೋಕವೇ ಚಿತ್ರ ವಿಚಿತ್ರ. ಅವರು ನಮಗೆ ಎಲ್ಲೆಂದರಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅವರನ್ನು ನಾವು ಧಾರ್ಮಿಕ ಯಾತ್ರೆಗಳಾದ ಮಾಹಾಕುಂಭಮೇಳ, ಕುಂಭಮೇಳದಂತಹ ಸಮಯದಲ್ಲಿ ಮಾತ್ರ ಕಾಣಬಹುದು. ಅವರಲ್ಲೂ ಅಪಾರ ದೈವಿಕ ಶಕ್ತಿಯಿರುತ್ತದೆ ಎಂಬುದು ನಂಬಿಕೆ. ಅವರ ಕಟ್ಟುನಿಟ್ಟಿನ ದೈನಂದಿನ ನಿಯಮಗಳು ಮತ್ತು ಕಠಿಣವಾದ ಜೀವನ ಶೈಲಿ ಎಂತಹ ವ್ಯಕ್ತಿಯನ್ನಾದರೂ ಒಮ್ಮೆ ದಂಗಾಗಿಸುತ್ತದೆ. ದೂರದಿಂದ ಅಥವಾ ಹೊರಗಡೆಯಿಂದ ನೋಡುವಾಗ ಅವರು ಅಸ್ಠವ್ಯಸ್ಥವಾದ ಕೂದಲನ್ನು ಹೊಂದಿರುವಂತೆ, ಶಿಸ್ತನ್ನು ಮರೆತಂತೆ ಕಂಡರೂ ಅವರು ಮಾಡುವ ಪ್ರತಿಯೊಂದು ಕೆಲಸವೂ ವ್ಯವಸ್ಥಿತವಾಗಿ ಮಾಡುತ್ತಾರೆ. ಅವರು ನಾಗ ಸಾಧುಗಳು ಎನಿಸಿಕೊಳ್ಳಬೇಕಾದರೆ ಕಠಿಣವಾದ ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಈ ಸಂಬಂಧ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ಅವರು ಮನೆಯ ಬಾಗಿಲಿಗೆ ಬಂದಿದ್ರು. ಬಂದಾಗ ಅವರನ್ನ ಹೋಗಿ ಎನ್ನಲು ಆಗೋದಿಲ್ಲ, ಅವರು ಬಂದು ಆಶೀರ್ವಾದ ಮಾಡಿದ್ರು. ಯಾರಾದ್ರೂ ನಿಮ್ಮ ಮನೆಗೆ ಬಂದ್ರೆ ನೀವೂ ಹಾಗೇ ಕಳಿಸ್ತೀರಾ? ಹಾಗೆ ಧಾರ್ಮಿಕತೆಯಲ್ಲಿ ಬಂದಿದ್ರು, ಬಂದವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡೆ ಎಂದರು. ಈ ಮೊದಲು ನಾಗಸಾಧುಗಳು ಕೂಡ ಡಿಕೆ ಶಿವಕುಮಾರ್ ಅವರನ್ನು ಸಿಎಂ ಆಗಲೆಂದೇ ಆಶೀರ್ವಾದ ಮಾಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now