Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾಡಿಗೆ ನಾಗಮ್ಮ ಕೇಶವಮೂರ್ತಿ ಕೊಡುಗೆ ಅಪಾರ : ಮಾಜಿ ಸಚಿವ ಎಚ್.ಆಂಜನೇಯ ಕಂಬನಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.16 :  ಚಿತ್ರದುರ್ಗ- ದಾವಣಗೆರೆ ಅವಳಿ ಜಿಲ್ಲೆಯಲ್ಲಿ ರಾಜಕೀಯ ಛಾಪು ಮೂಡಿಸಿದ್ದ ನಾಗಮ್ಮ ಕೇಶವಮೂರ್ತಿ ನಾಡಿನ ದಿಟ್ಟ ಮಹಿಳೆ ಎಂದು ಮಾಜಿ ಸಚಿವ ಎಚ್.ಆಂಜನೇಯ  ಬಣ್ಣಿಸಿದ್ದಾರೆ.

ನಗರಸಭೆ ಸದಸ್ಯೆಯಾಗಿದ್ದ ನಾಗಮ್ಮ ಕೇಶವಮೂರ್ತಿ,  1972ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದರು. 1978ರಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಜನಪ್ರೀಯ ಶಾಸಕಿ ಎಂಬ ಹೆಗ್ಗಳಿಕೆ ಪಡೆದಿದ್ದರು. ಗುಂಡೂರಾವ್ ಸಚಿವ ಸಂಪುಟದಲ್ಲಿ ಪ್ರಾರ್ಥಮಿಕ-ಪ್ರೌಢ ಶಿಕ್ಷಣ ಸಚಿವಾಗಿ ಸೇವೆ ಸಲ್ಲಿಸಿದ ಅವರು, 1999ರಲ್ಲಿ ಮಸಯಕೊಂಡ ಕ್ಷೇತ್ರದಲ್ಲಿ ಮತ್ತೊಮ್ಮೆ ಗೆಲುವು ದಾಖಲಿಸಿ, ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ ಅವರ ಬದ್ಧತೆ ಈಗಲೂ ಮಾದರಿ ಆಗಿದೆ.

ತಮ್ಮ ಸುಧೀರ್ಘ ರಾಜಕೀಯ ಜೀವನದಲ್ಲಿ ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ದಿಗೆ ಅವರು ನೀಡಿದ ಕೊಡುಗೆ ಸ್ಮರಣೀಯ.

ಅದರಲ್ಲೂ  ಶಿಕ್ಷಣ ಸಚಿವರಾಗಿದ್ದ ಸಂದರ್ಭ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಕ್ಕೆ ಕಡಿವಾಣ ಹಾಕಲು ನೇರ ನೇಮಕಾತಿ ಪದ್ಧತಿ ಜಾರಿಗೊಳಿಸುವ ಮೂಲಕ ಅರ್ಹರಿಗೆ ಉದ್ಯೋಗ ಸಿಗುವ  ವ್ಯವಸ್ಥೆ ತಂದರು. ಈ ಮೂಲಕ ಮಕ್ಕಳಿಗೆ ಗುಣಮಟ್ಟದ ಬೊಧನೆ ಸಿಗುವ ಜೊತೆಗೆ ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗೆ ಶ್ರಮಿಸಿದ್ದರು.

ನನ್ನಂತಹ ಯುವಕರು ರಾಜಕೀಯದತ್ತ ಆಕರ್ಷಣೆ ಬೆಳೆಸಿಕೊಂಡು ಉನ್ನತ ರಾಜಕೀಯ ಸ್ಥಾನಮಾನ ಪಡೆಯಲು ನಾಗಮ್ಮ ಕೇಶಮೂರ್ತಿ ಅವರೇ ಮುಖ್ಯ ಕಾರಣಕರ್ತರು.

ನಮ್ಮನ್ನು ಸ್ವಂತ ಮಕ್ಕಳಂತೆ ಕಾಣುತ್ತಿದ್ದ, ನಮ್ಮ ರಾಜಕೀಯ ಬೆಳವಣಿಗೆಗೆ ಶ್ರಮಿಸುತ್ತಿದ್ದ ಅವರು ನಮ್ಮ ಪಾಲಿಗೆ ರಾಜಕೀಯ ಗುರು ಅಷ್ಟೇ ಅಲ್ಲದೇ ಅಮ್ಮ ಆಗಿದ್ದರು. ಅವರ ಅಗಲಿಕೆ ಸುದ್ದಿ ಸ್ವಂತ ತಾಯಿಯನ್ನೇ ಕಳೆದುಕೊಂಡಷ್ಡು ದುಃಖವನ್ನು ಉಂಟು ಮಾಡಿದೆ.

ನಮ್ಮಂತಹ ರಾಜಕಾರಣಿಗಳ ಪಾಲಿಗೆ ತಾಯಿ ಆಗಿದ್ದ ಅವರ ಸೇವೆ, ಮಾತೃವಾತ್ಸಲ್ಯ ಇನ್ನೂ ನೆನಪಷ್ಟೇ ಎಂಬುದು ದುಃಖಕರ ವಿಷಯವಾಗಿದೆ. ಮಹಾತಾಯಿ ಆತ್ಮಕ್ಕೆ ಶಾಂತಿ ಲಭಿಸಲಿ, ದುಃಖತಪ್ತ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ದುಃಖಭರಿಸುವ ಶಕ್ತಿ ಬುದ್ಧ, ಬಸವಾದಿ ಶರಣರು ನೀಡಲಿ ಎಂದು ಮಾಜಿ ಸಚಿವ ಎವ್.ಆಂಜನೇಯ ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...