ಅಂತರ್ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಗೌರವ ಪ್ರಶಸ್ತಿ ಪಡೆದ ನಾಗಭೂಷಣ್

1 Min Read

ಚಿತ್ರದುರ್ಗ , (ಅ.10) : ಕರ್ನಾಟಕ,ಗೋವಾ,ಮಹಾರಾಷ್ಟ್ರ ರಾಜ್ಯದಲ್ಲಿನ ಅಂತರರಾಜ್ಯ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಶಿಕ್ಷಕ ನಾಗಭೂಷಣ್ ಅವರಿಗೆ ಶನಿವಾರ ಬೆಳಗಾವಿಯಲ್ಲಿ ಅಂತರ್ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ನಾಗಭೂಷಣ್ ಕೆ.ಟಿ.ಇವರು  ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ನಾಡು,ನುಡಿ, ಸಾಹಿತ್ಯ, ಸಂಸ್ಕೃತಿ, ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಸಲ್ಲಿಸಿದ  ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅಂತರ್ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಗೌರವ ಪ್ರಶಸ್ತಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಗೋವ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಲಕ್ಷ್ಮೀಕಾಂತ  ಪಾರ್ಸೇಕರ್,
ದೆಹಲಿಯ ಮಾಜಿ ಕೇಂದ್ರಿಯ ಮಂತ್ರಿಗಳಾದ ಶ್ರೀಮತಿ ರತ್ನಮಾಲಾ ಸಾವನೂರು,
ಬೆಳಗಾವಿಯ ಮಾಜಿ ಸಂಸದರಾದ ಬ್ಯಾರಿಸ್ಟರ್ ಶ್ರೀ ಅಮರ್ ಸಿಂಹ ಪಾಟೀಲ್,ಉಪಸ್ಥಿತರಿದ್ದರು.

ನಾಗಭೂಷಣ್ ರವರ ಉತ್ತಮವಾದ ಶೈಕ್ಷಣಿಕ ಸೇವೆಯಿಂದಾಗಿ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ ಎಂದು ಜಿಲ್ಲೆಯ ಉಪನಿರ್ದೇಶಕರಾದ ರವಿಶಂಕರ್ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಡಯಟ್ ನ ಪ್ರಾಂಶುಪಾಲರಾದ ಎಸ್.ಕೆ.ಬಿ.ಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್, ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್, ಶಾಲಾ ಸಿಬ್ಬಂದಿ ಹಾಗೂ ಎಸ್.ಡಿ.ಎಂ ಸಿ.ಸಮಿತಿ ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಹಾಗೂ ಕಟ್ಟಡ, ಇಂಜಿನಿಯರಿಂಗ್ ಮತ್ತು ಪೊಲೀಸ್ ಇಲಾಖೆ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡಿದ ವ್ಯಕ್ತಿಗಳಿಗೆ ಅಂತರ್ ರಾಜ್ಯ ಮಟ್ಟದ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *