ಬೆಂಗಳೂರು: ಇಂದು ಸದನದಲ್ಲಿ ಡಿಕೆಶಿ ಹಾಗೂ ಸಚಿವ ಈಶ್ವರಪ್ಪ ನಡುವೆ ಮಾತಿನ ಚಕಮಕಿ ನಡೆದಿದೆ. ಆ ವೇಳೆ ಒಬ್ಬರಿಗೊಬ್ಬರು ಬೈದಾಡಿಕೊಂಡಿದ್ದಾರೆ. ನೀನು ಜೈಲಿಗೆ ಹೋಗಿ ಬಂದವನು ನೀನು ದೇಶದ್ರೋಹಿ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಈ ವಿಚಾರ ಇದೀಗ ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನ ಕೆರಳಿಸಿದೆ.
ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಸಚಿವ ಈಶ್ವರಪ್ಪ ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಈಶ್ವರಪ್ಪ ಲುಚ್ಚ ಲುಚ್ಚ ಎಂಬ ಘೋಷಣೆ ಕೂಗಿದ್ದಾರೆ.
ಇದೇ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಅವರನ್ನ ಕೈ ಕಾಲು ಹಿಡಿದು ವಶಕ್ಕೆ ಪಡೆದು, ಕರೆದುಕೊಂಡು ಹೋಗಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವಾಗಲೂ ಈಶ್ವರಪ್ಪ ವಿರುದ್ಧ ಘೋಷಣೆ ಕೂಗುತ್ತಾ ನಡೆದಿದ್ದಾರೆ. ಸ್ಥಳದಲ್ಲಿ ಪೊಲೀಸರು ಸಹ ಹೆಚ್ಚಿನ ಸಂಖ್ಯೆಯಲ್ಲೇ ಜಮಾಯಿಸಿದ್ದು, ಕಂಡು ಬಂದಿದೆ.