ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಬದಲಾವಣೆ..!

suddionenews
1 Min Read

ಬೆಂಗಳೂರು: ಕರ್ನಾಟಕದಲ್ಲಿರುವ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ವಿಮಾನ ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ಹೆಸರಿಡಲು ಯೋಜಿಸಿದೆ. ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿಯನ್ನು ಸಲ್ಲಿಸಿದೆ. ವಿಜಯಪುರ, ಹುಬ್ನಳ್ಳ, ಶಿವಮೊಗ್ಗ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರುಗಳನ್ನಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ವಿಮಾನ ನಿಲ್ದಾಣಗಳಿಗೆ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ, ಕಿತ್ತೂರು ರಾಣಿ ಚನ್ನಮ್ಮ ವಿಮಾನ ನಿಲ್ದಾಣ, ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಲಿದ್ದಾರೆ. ಈ ಸಂಬಂಧ ಸಂಸತ್ತಿನಲ್ಲಿ ನಡೆತುತ್ತಿರುವ ಅಧಿವೇಶನದಲ್ಲಿ ಲೋಕಸಭೆಯಲ್ಲಿ ವಿಮಾನ ನಿಲ್ದಾಣಗಳ ಉದ್ದೇಶಿತ ನಾಮಕರಣದ ಕುರಿತು ಪ್ರಶ್ನೆಗೆ ಉತ್ತರಿಸಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರುಳೀಧರ್ ಮೊಹೋಲ್, ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ವಿಮಾನ ನಿಲ್ದಾಣಗಳಿಗೆ ಹೆಸರುಗಳನ್ನು ಪ್ರಸ್ತಾಪಿಸಿದ ಹತ್ತು ರಾಜ್ಯಗಳ ವಿವರಗಳನ್ನು ನೀಡಿದ್ದಾರೆ.

2023ರ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ‌ದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವೂ ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚೆನ್ನಮ್ಮ ಎಂದು ಹೆಸರಿಡಲು ಪ್ರಸ್ತಾವನೆಯನ್ನು ಪರಿಗಣಿಸುವುದಾಗಿ ತಿಳಿಸಿತ್ತು. ವಿಮಾನ ನಿಲ್ದಾಣವನ್ನು ಹೆಸರಿಸುವ ಅಧಿಕಾರವನ್ನು ನಾಗರಿಕ ವಿಮಾನಯಾನ ಸಚಿವಾಲಾಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಂದಿದ್ದು, ರಾಜ್ಯಗಳು ಅದರ ಬಗ್ಗೆ ರಾಜ್ಯ ಶಾಸಕಾಂಗದ ನಿರ್ಣಯಗಳ ರೂಪದಲ್ಲಿ ಪ್ರಸ್ತಾವನೆಯನ್ನು ಕಳುಹಿಸಬಹುದು ಎಂದು ಎಂಬಿ ಪಾಟೀಲ್ ಅವರು ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *