ದಾವಣಗೆರೆ ಫೆ.11 : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು, ಒಂದು ವೇಳೆ ಶೇ.60 ಕ್ಕಿಂತ ಕಡಿಮೆ ಕನ್ನಡ ಭಾಷೆ ಬಳಿಕೆ ಮಾಡಿ ನಾಮಫಲಕ ಹಾಕಿದ್ದಲ್ಲಿ, ಅಂತಹ ನಾಮಫಲಕವನ್ನು ತೆರವುಗೊಳಿಸಲಾಗುವುದು ಹಾಗೂ ದಂಡವನ್ನು ಪಾಲಿಕೆಯಿಂದ ವಿಧಿಸಲಾಗುವುದು.
ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಾಲೀಕರು ತಮ್ಮ ವಾಣಿಜ್ಯ ಮಳಿಗೆಗಳಿಗೆ ನಾಮಫಲಕಯನ್ನು ಕಡ್ಡಾಯವಾಗಿ ಶೇ.60 ರಷ್ಡು ಕನ್ನಡ ಭಾಷೆಯಲ್ಲಿ ಅಳವಡಿಸಬೇಕು ಹಾಗೂ ನಾಮಫಲಕದಲ್ಲಿ ಊರಿನ ಹೆಸರನ್ನು ನಮೂದಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











