Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂದಮೂರಿ ತಾರಕರತ್ನ Health update ; ಆರೋಗ್ಯ ಸ್ಥಿರ, ಮುಂದುವರಿದ ಚಿಕಿತ್ಸೆ

---Advertisement---

ಬೆಂಗಳೂರು : ನಟ ನಂದಮೂರಿ ತಾರಕರತ್ನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 48 ಗಂಟೆಗಳ ತಪಾಸಣೆ (Observation) ಮುಗಿದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನದ ನಂತರ ತಾರಕರತ್ನ ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

ಕುಂಪ್ಪಂ ನಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಂತರ ಅವರನ್ನು ಬೆಂಗಳೂರಿನ
ನಾರಾಯಣ ಹೃದಯಾಲಯದ ವೈದ್ಯರ ತಂಡವು ಚಿಕಿತ್ಸೆ ಮುಂದುವರೆಸಿದೆ. ಆದರೆ, ಇಂದಿನ ವೈದ್ಯಕೀಯ ಪರೀಕ್ಷೆಗಳು ನಿರ್ಣಾಯಕ. ಅವರು ಇಂದು ಎಂಆರ್‌ಐ (MRI) ಸ್ಕ್ಯಾನ್ ಮಾಡಲಿದ್ದಾರೆ. ಇದರ ಆಧಾರದ ಮೇಲೆ ಚಿಕಿತ್ಸೆಯನ್ನು ಮುಂದುವರಿಸಲಾಗುವುದು.

ಆರೋಗ್ಯ ಸಚಿವ ಸುಧಾಕರ್ ಅವರು ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ತಾರಕರತ್ನ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಅವರ ಹೃದಯ ಬಡಿತ ಸಾಮಾನ್ಯವಾಗಿದೆ ಆದರೆ ಅವರ ಮೆದುಳಿನ ಕಾರ್ಯವು ಸರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹೃದಯಾಘಾತವಾದ ನಂತರ 30 ನಿಮಿಷಗಳ ಕಾಲ ರಕ್ತ ಸಂಚಾರ ಸ್ಥಗಿತಗೊಂಡಿದ್ದರಿಂದ ಮೆದುಳಿನ ಕಾರ್ಯಚಟುವಟಿಕೆಗೆ ತೊಂದರೆಯಾಗಿರುವುದು ಪರೀಕ್ಷೆಗಳ ಮೂಲಕ ಪತ್ತೆಯಾಗಿದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...