Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂದಿನಿ ಹಾಲಿನ ದರ ಹೆಚ್ಚಳ ಮಾಡ್ತೇವೆ.. ಆ ಹಣ ರೈತರಿಗೆ ಹೋಗುತ್ತೆ : ಸಿದ್ದರಾಮಯ್ಯ ಘೋಷಣೆ

---Advertisement---

 

ರಾಮನಗರ: ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿನಿ ಹಾಲನ್ನು ಹೆಚ್ಚು ಮಾಡಿ, ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು. ಆದರೆ ಈಗ ಮತ್ತೆ ನಂದಿನಿ ದರವನ್ನು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾಗಡಿ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ದರ ನೇರವಾಗಿ ರೈತರಿಗೆ ಹೋಗಬೇಕು. ನಂದಿನ ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಸಭೆ ಕರೆದು, ಚರ್ಚೆ ಮಾಡಿ ದರ ಹೆಚ್ಚಳ ಮಾಡೋಣಾ ಎಂದಿದ್ದಾರೆ.

ಇದೇ ವೇಳೆ ಜೆಡಿಎಸ್ ಬಗ್ಗೆ ಹರಿಹಾಯ್ದಿರುವ ಸಿಎಂ ಸಿದ್ದರಾಮಯ್ಯ ಅವರು, ನೀವೆಲ್ಲಾ ರೈತರ ಮಕ್ಕಳಿದ್ದೀರ. ಮೂರು ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದರೂ ಲಬ್ಬೋ ಲಬ್ಬೋ ಅಂತ ಹೇಳುತ್ತಾರೆ. ನಾವೂ ರೈತರ ಮಕ್ಕಳು ರೈತರ ಮಕ್ಕಳು ಅಂತ ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ..? ಏನೂ ಮಾಡದೆ ನಾವೂ ರೈತರ ಮಕ್ಕಳು ಅಂತ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೆಂಪೇಗೌಡರ ಜಯಂತಿ ಮಾಡಿದ್ದು ನಮ್ಮ‌ಸರ್ಕಾರ. ಬಹಳಷ್ಟು ಒಕ್ಕಲಿಗ ನಾಯಕರು ಎನಿಸಿಕೊಂಡವರು ಮಾಡಲೇ ಇಲ್ಲ. ಈ ಹಿಂದೆ ಸಿಎಂ ಆಗಿದ್ದಾಗ ಕೆಂಪೇಗೌಡ ಜಯಂತಿ ಆಚರಣೆಯ ಸೂಚನೆ ನೀಡಲಾಗಿತ್ತು. ಮಾಗಡಿ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರಿಗೂ ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment