ದಾವಣಗೆರೆ: ನಂದಿನಿ ಬೂತೂಗಳಿಗೆ ಬೆಳ್ಳಂ ಬೆಳಗ್ಗೆಯೇ ಹಾಲು ಸಪ್ಲೈ ಮಾಡುವ ಕೆಲಸವನ್ನು ವಾಹನಗಳು ಮಾಡುತ್ತವೆ. ಒಂದೇ ವಾಹನದಲ್ಲಿಯೆ ಹಲವು ಅಂಗಡಿಗಳಿಗೆ ಸಪ್ಲೈ ಮಾಡಲಾಗುತ್ತದೆ. ಇದೀಗ ದಾವಣಗೆರೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಂದಿನಿ ಹಾಲು ಸಾಗಿಸುತ್ತಿದ್ದ ವಾಹನ ಕೆರೆಗೆ ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಈ ವಾಹನದ ಮೂಲಕ ದೇವರಹಳ್ಳಿ ಅಂಗಡಿಗಳಿಗೆ ಹಾಲು ವಿತರಿಸಲು ಹೊರಟಿದ್ದರು. ನಲ್ಲೂರು ಕಡೆಗೆ ಹೊರಟಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.
ವಾಹನದಲ್ಲಿ ಸುಮಾರು 500ಕ್ಕೂ ಹೆಚ್ಚ ಲೀಟರ್ ನಷ್ಟು ಹಾಲನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಅಪಘಾತದಿಂದಾಗಿ ಹಾಲೆಲ್ಲಾ ಕೆರೆಯ ಪಾಲಾಗಿದೆ. ಸದ್ಯ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಘಟನೆ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…