Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವಂಬರ್ 23 ರಂದು ನನ್ನ ನಾಡು ನನ್ನ ಹಾಡು ಕಾರ್ಯಕ್ರಮ

Facebook
Twitter
Telegram
WhatsApp

 

ಚಿತ್ರದುರ್ಗ : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಲಗೇತನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನವಂಬರ್ 23 ಮತ್ತು 24 ವರೆಗೆ ಎರಡು ದಿನಗಳ ಕಾಲ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನನ್ನನಾಡು ನನ್ನಹಾಡು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ನವಂಬರ್ 23 ರಂದು ಮಧ್ಯಾಹ್ನ ಎರಡು ಗಂಟೆಗೆ ನನ್ನ ನಾಡು ನನ್ನ ಹಾಡು ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆಎಂ.ಶಿವಸ್ವಾಮಿ ಉದ್ಘಾಟಿಸುವರು. ಮುಖ್ಯಶಿಕ್ಷಕ ಬಿ.ವಿ.ನಾಥ್ ಅಧ್ಯಕ್ಷತೆ ವಹಿಸುವರು.

ಶ.ಸಾ.ಪ ಜಿಲ್ಲಾ ಕಾರ್ಯದರ್ಶಿ ಹುರುಳಿ ಬಸವರಾಜ್ ಕನ್ನಡನಾಡಿನ ಸಾಹಿತ್ಯ ಲೋಕದ ಬಗ್ಗೆ ಉಪನ್ಯಾಸ ನೀಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್‍ಕೆ.ಮಲ್ಲಿಕಾರ್ಜುನ್, ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ, ರಂಗನಿರ್ದೇಶಕ ಕೆಪಿಎಂ.ಗಣೇಶಯ್ಯ ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.
ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ದ.ರಾ.ಬೇಂದ್ರೆ ಬರೆದ ಬಟ್ಟೆಯಲ್ಲ ಬಣ್ಣವಲ್ಲ ಬೆಳಕಿನ ಈಟಿ, ಬಂಕಿಮಚಂದ್ರ ಚಟರ್ಜಿ ವಿರಚಿತ ವಂದೇಮಾತರಂ, ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೋರರ ರಾಷ್ಟ್ರಗೀತೆ ಮುಂತಾದ ಗೀತೆಗಳನ್ನು ಧ್ವನಿಮುದ್ರಿಕೆಗಳ ಸಂಗೀತ ಸಂಯೋಜನೆಯಲ್ಲಿ ರಾಗಬದ್ಧವಾಗಿ ತರಬೇತಿ ನೀಡಲಾಗುವುದು ಎಂದು ರಂಗಸೌರಭ ಕಲಾ ಸಂಘದ ನಿರ್ದೇಶಕ ಕೆ. ದಯಾನಂದ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

error: Content is protected !!