ಸುದ್ದಿಒನ್, ಚಿತ್ರದುರ್ಗ : ಇದೇ ಅಕ್ಟೋಬರ್ 08 ರಂದು ನಗರದಲ್ಲಿ ನಡೆದ ಹಿಂದೂ ಮಹಾ ಗಣಪತಿ ಶೋಭಾಯಾತ್ರೆಯಲ್ಲಿ ಗಾಂಧಿಯವರನ್ನು ಹತ್ಯೆ ಮಾಡಿದ ಹಂತಕ ನಾಥೂರಾಮ್ ಗೋಡ್ಸೆ ಚಿತ್ರವನ್ನು ಪ್ರದರ್ಶನ ಮಾಡಲಾಗಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಗೋಡ್ಸೆ ಫೋಟೋ ಪ್ರದರ್ಶಿಸಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವುದಲ್ಲದೇ ಶಾಂತಿ ಭಂಗ ಹಾಗೂ ಕೋಮು ಸೌಹಾರ್ದತೆಗೆ ದಕ್ಕೆ ತರಲು ಯತ್ನಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಹನುಮಂತಪ್ಪ ಎಂಬುವವರಿಂದ ದೂರು ನೀಡಿದ್ದರು.
ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ IPC 505/1(C), 505/1(B) ಅಡಿಯಲ್ಲಿ ಅಕ್ಟೋಬರ್ 09 ರಂದು ಪ್ರಕರಣ ದಾಖಲಾಗಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






