Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ವಿಶೇಷ ಲೆಕ್ಕದಲ್ಲೂ ಸೈ, ಸೇವೆಯಲ್ಲೂ ಸೈ: ಚಿತ್ರದುರ್ಗದ ಸಿಎ ಕೆ. ಮಧುಪ್ರಸಾದ್ ಸಮಾಜಕ್ಕೆ ಮಾದರಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ 01: ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಅಂಗವಾಗಿ, ವೃತ್ತಿಪರ ನಿಷ್ಠೆ ಮತ್ತು ಸಮಾಜಮುಖಿ ಸೇವೆಯ ಮೂಲಕ  ಗುರುತಿಸಿಕೊಂಡಿರುವ ಚಿತ್ರದುರ್ಗದ ಚಾರ್ಟರ್ಡ್ ಅಕೌಂಟೆಂಟ್ ಕೆ. ಮಧುಪ್ರಸಾದ್ ಅವರು ಅನೇಕರಿಗೆ ಮಾದರಿಯಾಗಿದ್ದಾರೆ.

ಸೇವೆ, ಸಮರ್ಪಣೆ, ಸಾಧನೆ, ಸ್ಪೂರ್ತಿ ಹಾಗೂ ಸಂಘಟನೆ ಎಂಬ ‘5 ಎಸ್’ಗಳ ಸಮನ್ವಯವೇ ಅವರ ವ್ಯಕ್ತಿತ್ವದ ವಿಶೇಷ. “ಸಾಮಾಜಿಕ ಸೇವೆ ಎಂದರೆ ನಾ ಮುಂದು” ಎಂಬ ಧ್ಯೇಯದೊಂದಿಗೆ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವ ಅವರ ಸರಳತೆ, ಸೌಜನ್ಯ ಮತ್ತು ಸೇವಾಭಾವ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಅವರ ಮಿತ್ರ ಎಂ.ಕೆ. ರವೀಂದ್ರ ಪ್ರಶಂಸಿಸಿದ್ದಾರೆ.

1967ರ ಜುಲೈ 15ರಂದು ಜನಿಸಿದ ಕೆ. ಮಧುಪ್ರಸಾದ್ ಅವರು ಖ್ಯಾತ ವಕೀಲರಾದ ಕೀರ್ತಿ ಕುಮಾರ್ ಹಾಗೂ ನಿರ್ಮಲಾದೇವಿ ದಂಪತಿಯ ಪುತ್ರರು. ಪತ್ನಿ ಮಾಧುರಿ, ಓರ್ವ ಪುತ್ರ ಶ್ರೀ ಕಾರ್, ಓರ್ವ ಪುತ್ರಿ ನೈಮಿಷ, ಓರ್ವ ಅಕ್ಕ ಹಾಗೂ ಓರ್ವ ತಮ್ಮನನ್ನು ಒಳಗೊಂಡ ಸುಖೀ ಕುಟುಂಬದಲ್ಲಿ ಬೆಳೆದಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಚಿತ್ರದುರ್ಗದ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ (1ರಿಂದ 7ನೇ ತರಗತಿ) ಪೂರ್ಣಗೊಳಿಸಿದ ಅವರು, ಬಳಿಕ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದರು. ನಂತರ ಎಸ್‌ಜೆಎಂ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪಿಯುಸಿ ಹಾಗೂ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದರು.

ಪದವಿ ನಂತರ ಅಂದಿನ ಖ್ಯಾತ ಲೆಕ್ಕಪರಿಶೋಧಕರಾದ ಶಂಭುಲಿಂಗಪ್ಪ ಪಿ.ಎಸ್. ಅವರ ಬಳಿ ಮೂರು ವರ್ಷಗಳ ಕಾಲ ಸಿಎ ಇಂಟರ್ನ್‌ಶಿಪ್ ತರಬೇತಿ ಪಡೆದರು. ಇದೇ ಅವಧಿಯಲ್ಲಿ ಬೆಳಗಾವಿ ಹಾಗೂ ಪಣಜಿಯ ಆದಾಯ ತೆರಿಗೆ ಇಲಾಖೆಯ ಇಂಟೆಲಿಜೆನ್ಸ್ ವಿಭಾಗದಲ್ಲಿ ಇನ್ಸ್‌ಪೆಕ್ಟರ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದರು.

ಸರ್ಕಾರಿ ಸೇವೆಯಲ್ಲಿದ್ದಾಗಲೇ ಸಿಎ ಪರೀಕ್ಷೆಯಲ್ಲಿ ಆಲ್ ಇಂಡಿಯಾ 41ನೇ ರ‌್ಯಾಂಕ್ ಗಳಿಸುವ ಮೂಲಕ ಚಿತ್ರದುರ್ಗ ಜಿಲ್ಲೆಯ ಇತಿಹಾಸದಲ್ಲೇ ಸಿಎ ರ‌್ಯಾಂಕ್ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

1993ರಲ್ಲಿ ಚಿತ್ರದುರ್ಗದಲ್ಲಿ ಸ್ವತಂತ್ರ ಸಿಎ ವೃತ್ತಿ ಆರಂಭಿಸಿದ ಅವರು, ಸುಮಾರು 33 ವರ್ಷಗಳ ಅನುಭವ ಹೊಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಹಲವಾರು ವಿದ್ಯಾರ್ಥಿಗಳು ಇಂದು ಯಶಸ್ವಿ  ಅಕೌಂಟೆಂಟ್‌ಗಳಾಗಿ ಹಾಗೂ ವೃತ್ತಿಪರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗೃಹಿಣಿಯಾಗಿದ್ದ ರಮ್ಯಾ ಅವರನ್ನು ಸಿಎ ಆಗಲು ಪ್ರೋತ್ಸಾಹಿಸಿ, ಇಂದು ಅವರು ಸ್ವತಂತ್ರವಾಗಿ ವೃತ್ತಿ ನಡೆಸುತ್ತಿರುವುದು ಅವರ ಮಾರ್ಗದರ್ಶನದ ಮಹತ್ವವನ್ನು ತೋರಿಸುತ್ತದೆ.

ದಾವಣಗೆರೆ ಮತ್ತು ಚಿತ್ರದುರ್ಗ ಸಿಎ ಅಸೋಸಿಯೇಷನ್‌ನ ಉಪಾಧ್ಯಕ್ಷರಾಗಿ 20 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅವರು, ಆದಾಯ ತೆರಿಗೆ ಹಾಗೂ ಜಿಎಸ್ಟಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅನೇಕ ಉಪನ್ಯಾಸಗಳನ್ನು ನೀಡಿದ್ದಾರೆ. ಸಾವಿರಾರು ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಬೆಳವಣಿಗೆಯಲ್ಲಿ ಅವರ ಸಲಹೆ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ.

ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅವರು, ರೋಟರಿ ಜಿಲ್ಲೆ 3160ರ ಮಾಜಿ ಗವರ್ನರ್ ಆಗಿ 75ಕ್ಕೂ ಹೆಚ್ಚು ಕ್ಲಬ್‌ಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ರೋಟರಿ ಸೇವಾ ಭವನ: ಎಸ್‌ಆರ್‌ಬಿಎಂಎಸ್ ರೋಟರಿ ಸೇವಾ ಭವನದ ಮೂಲಕ ಗುಣಮಟ್ಟದ ಆರೋಗ್ಯ ಸೇವೆ, ಕಡಿಮೆ ವೆಚ್ಚದ ಡಯಾಲಿಸಿಸ್, ಫಿಜಿಯೋಥೆರಪಿ, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಲ್ಯಾಬೊರೇಟರಿ ಹಾಗೂ ಫಾರ್ಮಸಿ ಸೇವೆಗಳು ಜನಸಾಮಾನ್ಯರಿಗೆ ಲಭ್ಯವಾಗುವಂತೆ ಮಾಡಿದ್ದಾರೆ. ಕಳೆದ 35 ವರ್ಷಗಳಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಸ್‌ಆರ್‌ಬಿಎಂಎಸ್ ರೋಟರಿ ಬಾಲಭವನ ಸಂಸ್ಥೆಯ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಬಸವೇಶ್ವರ ಪುನರ್ಜೋತಿ ಐ ಬ್ಯಾಂಕ್ : ಸ್ಥಾಪಕ ಕಾರ್ಯದರ್ಶಿಯಾಗಿ ಕಳೆದ 20 ವರ್ಷಗಳಲ್ಲಿ ಸುಮಾರು 2,500ಕ್ಕೂ ಹೆಚ್ಚು ನೇತ್ರಗಳನ್ನು ಸಂಗ್ರಹಿಸಿ ಅಂಧರ ಬದುಕಿಗೆ ಬೆಳಕಾಗಿದ್ದಾರೆ. ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಆಶಾಕಿರಣ: ಈ ಸಂಸ್ಥೆಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಅವರು ಕಳೆದ 15 ವರ್ಷಗಳಿಂದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಮತ್ತು ಶೈಕ್ಷಣಿಕ ಮಾರ್ಗದರ್ಶನ ನೀಡುತ್ತಿದ್ದು, ಸದ್ಯ ನಿರ್ದೇಶಕರಾಗಿದ್ದಾರೆ.ಭಾರತೀಯ ರೆಡ್ ಕ್ರಾಸ್ ಸೊಸೈಟಿ: ರಾಜ್ಯಮಟ್ಟದಲ್ಲಿ ಮೂರು ವರ್ಷಗಳ ಕಾಲ ಜಿಲ್ಲೆಯನ್ನು ಪ್ರತಿನಿಧಿಸಿ ಅನೇಕ ರಕ್ತದಾನ ಶಿಬಿರಗಳು ಹಾಗೂ ಸೇವಾ ಚಟುವಟಿಕೆಗಳನ್ನು ನಡೆಸಿದ್ದು, ಪ್ರಸ್ತುತ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಮಾಜಮುಖಿ ಸೇವೆಯನ್ನು ಗುರುತಿಸಿ 2016ರಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರೋಟರಿ ಸಂಸ್ಥೆಯ ಅತ್ಯುನ್ನತ ಗೌರವವಾದ ‘ಸರ್ವಿಸ್ ಅಬವ್ ಸೆಲ್ಫ್’ (Service Above Self) ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು ಹಲವಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿವೆ.

ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಅಂಗವಾಗಿ, ಕೆ. ಮಧುಪ್ರಸಾದ್ ಅವರು ವೃತ್ತಿಪರತೆಯ ಜೊತೆಗೆ ಸಮಾಜಸೇವೆಯಲ್ಲೂ ಇದೇ ಉತ್ಸಾಹ ಮತ್ತು ಬದ್ಧತೆಯೊಂದಿಗೆ ಮುಂದುವರಿಯಲಿ. ಅವರ ಸೇವೆ ಮತ್ತಷ್ಟು ಜನರಿಗೆ ಪ್ರೇರಣೆಯಾಗಲಿ ಎಂದು ಮಿತ್ರ ಎಂ.ಕೆ. ರವೀಂದ್ರ ಹೃತ್ಪೂರ್ವಕವಾಗಿ ಶುಭ ಹಾರೈಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now