Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವದೆಹಲಿಯಲ್ಲಿ ಡಿಸೆಂಬರ್ 7 ರಿಂದ 10ರವರೆಗೆ ರಾಷ್ಟ್ರೀಯ ಸಮಾವೇಶ :ಪ್ರೇಮ ಶ್ರೀ ಜೋಡಿದಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ. (ನ. 06) :  ಚಿತ್ರದುರ್ಗದಲ್ಲಿ ಕಳೆದ ಎರಡು ದಿನಗಳಿಂದ ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಕರ್ನಾಟಕ ದಕ್ಷಿಣ ಪ್ರಾಂತದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಕರಡು ನಿರ್ಣಯಗಳನ್ನು ತೆಗೆದುಕೊಂಡಿದ್ದು, ಅದರ ಜಾರಿಗೆ ಹೋರಾಟವನ್ನು ಮಾಡಲಾಗುವುದು ಎಂದು ಕರ್ನಾಟಕ ದಕ್ಷಿಣ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಕುಮಾರಿ ಪ್ರೇಮ ಶ್ರೀ ಜೋಡಿದಾರ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪರಿಷತ್‍ನ ಸಂಘಟನಾತ್ಮಾಕ ವಿಚಾತರವಾಗಿ 2023-24ನೇ ಸಾಲಿನ ಶಾಖೆಗಳು ಸದಸ್ಯತ್ವ, ಕಾಲೇಜು ಘಟಕ, ಹಾಸ್ಟಲ್ ಘಟಕ, ಸ್ಥಾನ ವಿಸ್ತಾರ ಕೇಂದ್ರ ಕುರಿತಂತೆ ಗರಿವಿಧಿ ಮತ್ತು ಆಯಾಮ ಕಾರ್ಯಗಳ ಕುರಿತು ಚರ್ಚೆಯನ್ನು ನಡೆಸಲಾಯಿತು.

ರಾಜ್ಯದ ಶೈಕ್ಷಣಿಕ ಪರಿಸ್ಥಿತಿ, ರಾಜ್ಯದ ವರ್ತಮಾನ ಪರಿಸ್ಥಿತಿ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದತಿಗೆ ಖಂಡನೆ ಕುರಿತಂತೆ ಅಂಗೀಕರಿಸಲಾಯಿತು. ರಾಜ್ಯ ಸರ್ಕಾರ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಕಾಲರ್ ಶಿಪ್‍ನ್ನು ನಿಲ್ಲಿಸಿದೆ. ಇದರ ಬಗ್ಗೆ ಹೋರಾಟವನ್ನು ಎಬಿವಿಪಿ ಕೈಗೆತ್ತಿಕೊಳ್ಳಲಿದೆ. ಈ ವಿದ್ಯಾರ್ಥಿ ವೇತನವನ್ನು ನಂಬಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ, ಇದಕ್ಕೆಲ್ಲಾ ರಾಜದ್ಯ ಸರ್ಕಾರ ಬರೆ ಎಳೆಯುತ್ತಿದೆ.

ಇದರೊಂದಿಗೆ ಕೇಂದ್ರ ಸರ್ಕಾರ ಶಿಕ್ಷಣ ನೀತಿಯನ್ನು ಜಾರಿ ಮಾಡಿದೆ. ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿತ್ತು. ಆದರೆ ಈಗ ಬಂದಿರುವ ಸರ್ಕಾರ ಅದನ್ನು ರದ್ದು ಮಾಡಿ ತನ್ನದೇ ಆದ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಹೊರಟಿದೆ, ಇದನ್ನು ಎಬಿವಿಪಿ ಖಂಡಿಸುತ್ತದೆ ಎಂದರು.

ರಾಜ್ಯ ಸರ್ಕಾರ ಎನ್.ಇ.ಪಿಯನ್ನು ರದ್ದು ಮಾಡಲು ಮುಂದಾಗಿದೆ ಇದನ್ನು ಖಂಡಿಸುತ್ತದೆ ರಾಜ್ಯದಲ್ಲಿ ಒಂದೊಂದು ಸರ್ಕಾರ ಆಡಳಿತವನ್ನು ನಡೆಸುವಾಗಲೂ ಒಂದೊಂದು ರೀತಿಯ ಶಿಕ್ಷಣ ಪದ್ದತಿಯನ್ನು ಜಾರಿ ಮಾಡುತ್ತದೆ ಇದರಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಯಾವ ಶಿಕ್ಷಣವನ್ನು ಪಡೆಯಬೇಕೆಂದು ಗೊಂದಲಿದ್ದಾರೆ ಎಂದ ಅವರು, ರಾಜ್ಯ ಸರ್ಕಾರ ತನ್ನ ಶಿಕ್ಷಣ ನೀತಿಯನ್ನು ಬರೀ ಕೇವಲ 5 ತಿಂಗಳಲ್ಲಿಯೇ ತಯಾರು ಮಾಡಿ ವಿದ್ಯಾರ್ಥಿಗಳಿಗೆ ನೀಡುವ ದಿಸೆಯಲ್ಲಿದೆ. ಇದೇ ರೀತಿ ಹಾಸ್ಟಲ್‍ಗಳ ಪರಿಸ್ಥಿತಿಯು ಸಹಾ ಸರಿಯಿಲ್ಲ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟಲ್ ಇಲ್ಲ ಇದರ ನಿರ್ಮಾಣಕ್ಕೂ ಸಹಾ ಸರ್ಕಾರ ಮುಂದಾಗಿಲ್ಲ, ಶೌಚಾ೧ಲಯಗಳು ಇಲ್ಲವಾಗಿದೆ. ಇದರ ಬಗ್ಗೆ ಸರ್ವೆಯನ್ನು ಮಾಡುವುದರ ಮೂಲಕ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು ಎಂದು ಪ್ರೇಮ ತಿಳಿಸಿದರು.

2023-24ನೇ ಸಾಲಿನಲ್ಲಿ ಕನಾಟಕ ದಕ್ಷಿಣ ಪ್ರಾಂತದ 1,83,690 ಸದಸ್ಯತ್ವವು, 145 ಶಾಖೆಗಳು, 615 ಕಾಲೇಜು ಘಟಕಗಳು, 118 ಸಂಪರ್ಕ ಸ್ಥಾನ 140 ವಿಸ್ತಾರ ಕೇಂದ್ರಗಳನ್ನು ಹೊಂದಿದೆ. ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮಾವೇಶವನ್ನು ಬಾಗಲಕೋಟೆಯಲ್ಲಿ ನಡೆಸಲಾಗುವುದು ಇದೇ ನ. 9 ರಂದು ಶಿವಮೊಗ್ಗದಲ್ಲಿ ನ. 10 ರಂದು ಬೆಂಗಳೂರಿನಲ್ಲಿ ಕಾಲೇಜು ಘಟಕಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ನವದೆಹಲಿಯಲ್ಲಿ ಡಿ.7 ರಿಂದ 10ರವರೆಗೆ ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ಹೇಳಿದರು.

ಗೋಷ್ಟಿಯಲ್ಲಿ ಜಿಲ್ಲಾ ಸಂಚಾಲಕ ಸಿದ್ದೇಶ್, ನಗರ ಕಾರ್ಯದರ್ಶಿ ಗೋಪಿ ವರುಣು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment