ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ, ರಾಷ್ಟ್ರೀಯ ವೈದ್ಯರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಶಾಲೆಯಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ವೈದ್ಯರ ವೇಷಭೂಷಣ ಧರಿಸಿ ತಮ್ಮ ಮುಂದಿನ ದಿನಗಳಲ್ಲಿ ಡಾಕ್ಟರ್ ಆಗುವ ಕನಸಿಸ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕನಸು ಕಾಣುವ ವಯಸ್ಸಿನಲ್ಲಿ ಕನಸು ಕಂಡು ಅದನ್ನು ನನಸು ಮಾಡಿಕೊಳ್ಳಲು ಶ್ರಮ ಪಟ್ಟು ಓದಬೇಕು ಎಂದು ಸಂಪತ್ ಕುಮಾರ್ ಸಿ ಡಿ ರವರು ಹೇಳಿದರು. ಪ್ರಾಥಮಿಕ ವಿಭಾಗದ ಸಂಯೋಜಕರಾದ ಶ್ರೀಮತಿ ರಾಜೇಶ್ವರಿ ಬಸವರಾಜಯ್ಯ ರವರು ಮುದ್ದು ಮಕ್ಕಳಿಗೆ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯ ನಿರ್ವಣಾಧಿಕಾರಿಯವರಾದ ರಘುಚಂದನ್, ಶಾಲೆಯ ಡೀನ್ ಆದ ಅನಂತ ರಾಮ್, ಶೈಕ್ಷಣಿಕ ನಿರ್ದೇಶಕರಾದ ಸಂಪತ್ ಕುಮಾರ್ ಸಿ ಡಿ, ಪ್ರಾoಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಜಾರೀನಾ, ಪಿ ಆರ್ ಓ ರವಿಕುಮಾರ್ ಮತ್ತು ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








