ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಜೂನ್ 2 ರಂದು ರಾಹುಲ್ ಗಾಂಧಿ, ಜೂನ್ 8 ರಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದೆ.
2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ಸುಬ್ರಮಣಿಯನ್ ಸ್ವಾಮಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ ವಿರುದ್ಧ ದೂರು ದಾಖಲಾಗಿತ್ತು. ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಂದು ಆರೋಪಿಸಿ ತನಿಖೆ ನಡೆಸಲು ಮನವಿ ಮಾಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆ ಮಾಡಿದ್ದಾರೆ. ಇದೀಗ ರಾಹುಲ್ ಗಾಂಧಿ ಮತ್ತು ಸೋನಿಯಾಗೆ ಸಮನ್ಸ್ ಜಾರಿ ಮಾಡಲಾಗಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಸಮಯ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ. ಇನ್ನು ಸೋನಿಯಾ ಗಾಂಧಿ ಅದೇ ದಿನಾಂಕದಂದು ಹಾಜರಾಗಲಿದ್ದಾರೆ ಎನ್ನಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಪ್ರಶ್ನೆ ಮಾಡಬಹುದು ಎನ್ನಲಾಗುತ್ತಿದೆ.