ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಇಡಿ ಮತ್ತೆ ಸಮನ್ಸ್ ನೀಡಿದೆ. ಆದ್ರೆ ಇಂದಿನ ಇಡಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬುದನ್ನು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಚುನಾಯಿತರಾಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ನಿನ್ನೆ ದೊಡ್ಡ ಕಾರ್ಯಕ್ರಮವನ್ನೇ ಮಾಡಲಾಗಿತ್ತು. ಇಡಿ ವಿಚಾರಣೆಗೆ ಹಾಜರಾಗದೆ ಇರುವ ವಿಚಾರದ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ನಿನ್ನೆಯೆಲ್ಲಾ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮವಿತ್ತು. ವಿನಯ್ ಕುಲಕರ್ಣಿಯವರ ಪೂರ್ವನಿಯೋಜಿತ ಕಾರ್ಯಕ್ರಮಗಳು ಇದಾವೆ. ಹೀಗಾಗಿ ಇಡಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದಿದ್ದಾರೆ.
ನಾನು ಹಾಜರಾಗದೆ ಇರುವುದಕ್ಕೆ ಇಡಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದೇನೆ. ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗುತ್ತಿದ್ದಾರೆ ಎಂದಿದ್ದಾರೆ. ಇನ್ನು ಇಂದು ಬೆಳಗ್ಗೆಯೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ ಕಿತ್ತೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಭಾಗವಹಿಸುತ್ತಿದ್ದಾರೆ.