ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಕೇಸ್ ಇನ್ನು ಮುಕ್ತಾಯವಾಗಿಲ್ಲ. ಅದೇ ಕೇಸಲ್ಲಿ ಈಗಾಗಲೇ ಡಿಕೆ ಶಿವಕುಮಾರ್ ಅವರನ್ನು ತನಿಖೆ ನಡೆಸುತ್ತಿದೆ. ಈಗ ಮತ್ತೆ ನೋಟೀಸ್ ನೀಡಿರುವ ಇಡಿ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲು ಕಾರ್ಯನಿರ್ವಹಿಸುತ್ತಿವೆ. ಪಕ್ಷದ ಸಂಕಷ್ಟದ ಸಮಯದಲ್ಲಿ, ನಮ್ಮಂತಹ ಕಾಂಗ್ರೆಸ್ಸಿಗರು ಟ್ರಸ್ಟ್ ಗಳ ಮೂಲಕ ಆ ಅಂಸ್ಥೆಗಳಿಗೆ ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ತಮಗೆ ಇಡಿ ನೋಟೀಸ್ ಬಂದ ಕೂಡಲೇ ಅಗತ್ಯವಿರುವ ಎಲ್ಲಾ ಮಾಹಿತಿ ಹಾಗೂ ಉತ್ತರಗಳನ್ನು ಈಗಾಗಲೇ ನೀಡಲಾಗಿದೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಇದೀಗ ದೆಹಲಿ ಪೊಲೀಸರು ಈ ತಿಂಗಳ 19ರ ಒಳಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಚಾರ್ಜ್ ಶೀಟ್ ಕೂಡ ಆಗಿದೆ. ಇದಾದ ಮೇಲೂ ದೆಹಲಿ ಪೊಲೀಸರು ನೋಟೀಸ್ ನೀಡಿದ್ದಾರೆ. ಗೊತ್ತಿಲ್ಲ ಏನು ಅಂತ. ಕಾನೂನಾತ್ಮಕವಾಗಿಯೇ ಅದಕ್ಕೆ ಉತ್ತರ ಕೊಡ್ತೇವೆ. ಇದು ಸರಿಯಿಲ್ಲ ನಾನು ಖಂಡಿಸ್ತೇನೆ. ನಾನು ಕೂಡ ಈ ನೋಟೀಸ್ ನಿಂದ ಶಾಕ್ ಆಗಿದ್ದೇನೆ. ಇಡಿ ಅಧಿಕಾರಿಗಳಿಗೆ ಈಗಾಗಲೇ ಎಲ್ಲಾ ರೀತಿಯ ದಾಖಲೆಗಳನ್ನು ನೀಡಿದ್ದೇವೆ. ನಾನು ಮತ್ತು ನನ್ನ ತಮ್ಮ ಇಬ್ಬರು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ಆದರೂ ನೋಟೀಸ್ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಇಡಿ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯನ್ನ ನಡೆಸ್ತಾ ಇದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಎದುರಾಗಿದೆ.


