Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರೀಯ ಜೂನಿಯರ್ ಕಬಡ್ಡಿ ಚಾಂಪಿಯನ್‌ಶಿಪ್: ಅ. 12ರಂದು ಚಿತ್ರದುರ್ಗದಲ್ಲಿ ಬಾಲಕರ ತಂಡಕ್ಕೆ ಆಯ್ಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 10 : ಬಿಹಾರ ರಾಜ್ಯದ ಪಾಟಲಿಪುತ್ರ ಕ್ರೀಡಾ ಸಂಕೀರ್ಣದಲ್ಲಿ ದಿನಾಂಕ: 01-11-2026 ರಿಂದ ದಿನಾಂಕ: 04-11-2026 ರವರೆಗೆ ನಡೆಯುವ 52ನೇ ಜೂನಿಯರ್ ಬಾಲಕರ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್‍ಗೆ ಭಾಗವಹಿಸಲು ಬೆಂಗಳೂರಿನಲ್ಲಿ ಬಾಲಕರ ಆಯ್ಕೆ ಪ್ರಕ್ರಿಯೆ ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ಚಿತ್ರದುರ್ಗ ಜಿಲ್ಲಾ ಅಮೇಚೂರ್ ಕಬ್ಬಡಿ ಅಸೋಸಿಯೇಷನ್‍ನ ಅಧ್ಯಕ್ಷರಾದ ಪಿ.ಸಿ. ಮುರುಗೇಶ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ 20 ವರ್ಷದೊಳಗಿನ ಬಾಲಕರ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ: 12-10-2026 ರಂದು ಮದ್ಯಾಹ್ನ 3.00 ಗಂಟೆಗೆ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಂಘಟಿಸಲಿದ್ದು, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಾಲಕರ ದೇಹದ ತೂಕ 75ಕೆಜಿ ಒಳಗೆ ದಿನಾಂಕ: 04-11-2006 ರ ನಂತರ ಜನಿಸಿ 20 ವರ್ಷದೊಳಗೆ ಇದ್ದು, ಚಿತ್ರದುರ್ಗ ಜಿಲ್ಲೆಯವರಾಗಿದ್ದು, ಆಧಾರ್‍ಕಾರ್ಡ್, ಜನನ ಪ್ರಮಾಣ ಪತ್ರ, ಎಸ್.ಎಸ್. ಎಲ್.ಸಿ. ಅಂಕಪಟ್ಟಿ, ಆಟಗಾರರ ಕ್ಲಬ್‍ನ ಲೆಟರ್‍ಹೆಡ್ ಮತ್ತು ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರ ಗಳೊಂದಿಗೆ ಭಾಗವಹಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ:ಪಿ.ಸಿ.ಮುರುಗೇಶ್ ಮೊ:9482013306, ದಾದಾಪೀರ್ ಮೊ:9480778282 ಸಂಪರ್ಕಿಸಲು ಸೂಚಿಸಲಾಗಿದೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now