Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರಿಗೆ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪ್ರಕಟ

Facebook
Twitter
Telegram
WhatsApp

 

 

ಚಿತ್ರದುರ್ಗ,  ಜ. 17  :  ಭಾರತ ಚುನಾವಣಾ ಆಯೋಗವು 2023 ನೇ ಸಾಲಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ನಿಮಿತ್ತ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಕೈಗೊಂಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಕರ್ನಾಟಕ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

2023ನೇ ಸಾಲಿನ ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು ಜಿ.ಆರ್.ಜೆ. ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶಿಖಾ ಸಿ. ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಿವ್ಯಾ ಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ಲೈಂಗಿಕ ಅಲ್ಪಸಂಖ್ಯಾತರು, ವಿಶೇಷ ಚೇತನÀ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದನ್ನು ಆಯೋಗ ಪ್ರಶಸ್ತಿಗೆ ಪರಿಗಣಿಸಿದೆ.

ಶಿಖಾ ಸಿ. ಅವರು ಕಳೆದ 2023 ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರನ್ನು ಹಾಗೂ ಇಲಾಖೆಯನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.

ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ಭಾರತ ಚುನಾವಣಾ ಆಯೋಗ ಪ್ರತಿ ವರ್ಷ ನವದೆಹಲಿಯಲ್ಲಿ ಜನವರಿ 25 ರಂದು ಹಮ್ಮಿಕೊಳ್ಳುವ  ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಡಿ ಉತ್ತಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಈ ರೀತಿಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚು ಮಾಡುವುದಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮತ್ತಷ್ಟು ದಕ್ಷತೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಲು ಉತ್ತೇಜನ ನೀಡುತ್ತದೆ ಎನ್ನುತ್ತಾರೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!