ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 20 : ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ 19 ವರ್ಷದೊಳಗಿನ ರಾಷ್ಟ್ರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಿದ್ದ ಚಿತ್ರದುರ್ಗದ ಕೆ.ಕೆ.ನ್ಯಾಷನಲ್ ಸ್ಕೂಲ್‍ನ ಹತ್ತನೆ ತರಗತಿ ವಿದ್ಯಾರ್ಥಿ ಪುರುಷೋತ್ತಮ್ ಹೆಚ್.ಎಂ. ದ್ವಿತೀಯ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಚಿತ್ರದುರ್ಗದ ಜಾನಪದ ಹಾಡುಗಾರ ಹರೀಶ್ ಎಂ.ಕೆ. ಭಾರತಮ್ಮ ದಂಪತಿಗಳ ಪುತ್ರ ಪುರುಷೋತ್ತಮ್ ಹೆಚ್.ಎಂ. ಬಾಲ್ಯದಿಂದಲೂ ಕ್ರಿಕೆಟ್‍ನಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದರಿಂದ ವಿವಿಧ ಹಂತಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ. ಕರ್ನಾಟಕ ತಂಡದ ಕೋಚ್ ಚಿನ್ನಯ್ಯ ಮಾರ್ಗದರ್ಶನದಂತೆ ರಾಷ್ಟ್ರ ಮಟ್ಟದ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡಿ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ಬೆಂಗಳೂರಿನ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್
ವತಿಯಿಂದ ಸನ್ಮಾನಿಸಲಾಯಿತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್