ಚಿತ್ರದುರ್ಗ ,ನ.18: ಜಿಲ್ಲೆಯಲ್ಲಿ ಈವರೆಗೆ 13,33,323 ಮಂದಿ ಡಿಜಿಟಲ್ ಗ್ರಂಥಾಲಯ ಸದಸ್ಯತ್ವ ಪಡೆದಿದ್ದಾರೆ. ಡಿಜಿಟಲ್ ಗ್ರಂಥಾಲಯ ನೋಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿ ಆರನೇ ಸ್ಥಾನದಲ್ಲಿದೆ.
ಚಿತ್ರದುರ್ಗ ನಗರ ಕೇಂದ್ರ ವ್ಯಾಪ್ತಿಯಲ್ಲಿ 1,99,632 ಡಿಜಿಟಲ್ ಗ್ರಂಥಾಲಯ ಸದಸ್ಯತ್ವ ಪಡೆದಿದ್ದಾರೆ. ಈ ಡಿಜಿಟಲ್ ಗ್ರಂಥಾಲಯದಲ್ಲಿ ಉಚಿತವಾಗಿ ನೋಂದಣಿ ಪಡೆಯಬಹುದಾಗಿದೆ.
ಮೂರು ವರ್ಷಗಳ ಹಿಂದೆ ಈ ಡಿಜಿಟಲ್ ಗ್ರಂಥಾಲಯ ಪ್ರಾರಂಭಗೊಂಡಿದೆ.
ರಾಜ್ಯದ ಗ್ರಂಥಾಲಯಗಳಲ್ಲಿ ಈಗ 2 ಕೋಟಿ 90 ಲಕ್ಷ ಮೇಲ್ಪಟ್ಟು ಸದಸ್ಯರನ್ನು ಹೊಂದಿದೆ. ಇದು ಭಾರತ ದೇಶದಲ್ಲಿ ನಂ.1 ಸ್ಥಾನವನ್ನು ಪಡೆದಿರುತ್ತದೆ. ಡಿಜಿಟಲ್ ಗ್ರಂಥಾಲಯದಲ್ಲಿ ಒಟ್ಟು 16 ಲಕ್ಷ ಪುಸ್ತಕಗಳು ಸಿಗುತ್ತವೆ. ಇದರಲ್ಲಿ ಇ-ಪುಸ್ತಕಗಳು, ವಿಡಿಯೋಗಳು, ಜರ್ನಲ್ಸ್ಗಳು, ಶೈಕ್ಷಣಿಕ ಸಂಶೋಧನೆ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಕಥೆ, ಕಾದಂಬರಿಗಳು, ಆತ್ಮ ಚರಿತ್ರೆಗಳು ಮಕ್ಕಳಿಗೆ ಪಠ್ಯಪುಸ್ತಕಗಳು, ನಿಯತಕಾಲಿಕೆಗಳು ಇತರೆ ಭಾಷೆಯ ಪುಸ್ತಕಗಳು ಸಿಗುತ್ತವೆ.
ಡಿಜಿಟಲೀಕರಣದ ರೂವಾರಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ ಅವರಾಗಿದ್ದು, ಇವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ಜಿಲೆಯ ಸಿಬ್ಬಂದಿಗಳು ಡಿಜಿಟಲ್ ಗ್ರಂಥಾಲಯದ ಕೆಲಸವನ್ನು ಮಾಡಲಾಗುತ್ತಿದೆ. ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ ಅವರಿಗೆ 80ಕ್ಕೂ ಹೆಚ್ಚು ರಾಷ್ಟ್ರಮಟ್ಟದ ಪ್ರಶಸ್ತಿಗಳು ಲಭಿಸಿವೆ.
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಇದೇ ನವೆಂಬರ್ 16, 17 ಮತ್ತು 18ರಂದು ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆ, ಸರಸ್ವತಿಪುರಂ ಬಡಾವಣೆಗಳಲ್ಲಿ ಮನೆ ಮನೆಗೆ ಹೋಗಿ ಡಿಜಿಟಲ್ ಗ್ರಂಥಾಲಯ ಮಹತ್ವ ತಿಳಿಸಿ, ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಪುಸ್ತಕಗಳನ್ನು ತೆಗೆದುಕೊಂಡು ಓದಲು ಸದಸ್ಯತ್ವ ನೋಂದಣಿಯನ್ನು ಆಸಕ್ತಿ ಇರುವ ಓದುಗರಿಗೆ ನೋಂದಣಿ ಮಾಡಿಸಲಾಗುತ್ತಿದೆ ಎನ್ನುತ್ತಾರೆ ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್.
ಡಿಜಿಟಲ್ ಗ್ರಂಥಾಲಯದ ನೋಂದಣಿ ಪ್ರಕ್ರಿಯೆ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಭಿವೃದ್ಧಿಪಡಿಸಿರುವ “ಇ-ಸಾರ್ವಜನಿಕ ಗ್ರಂಥಾಲಯ” ಮೊಬೈಲ್ ಆ್ಯಪ್ ಹಾಗೂ ಜಾಲತಾಣ www.karnatakadigitalpubliclibrary.org ಮೂಲಕ ನೋಂದಣಿ ಮಾಡಿಕೊಂಡು ಪುಸ್ತಕಗಳನ್ನು ಓದಬಹುದಾಗಿದೆ.
ಗೂಗಲ್ ಕ್ರೋಮ್ ಮೂಲಕ www.karnatakadigitalpubliclibrary.org ಟೈಪ್ ಮಾಡಿ, ಲಾಗಿನ್, ರಿಜಿಸ್ಟರ್ ಬಟನ್ ಆಯ್ಕೆ ಮಾಡಿ, ಈಗ ರಚಿಸಿ ಬಟನ್ ಕ್ಲಿಕ್ ಮಾಡಿ, ನಂತರ ಹೆಸರು, ಮೊಬೈಲ್ ಸಂಖ್ಯೆ, ಇ-ಮೇಲ್ ನೀಡಿ, ಡ್ರಾಪ್ಡೌನ್ ಪರಿವಿಡಿಯಿಂದ ಗ್ರಂಥಾಲಯವನ್ನು ಆಯ್ಕೆ ಮಾಡಿ ಸೈನ್ ಅಪ್ ಕ್ಲಿಕ್ ಮಾಡಬೇಕು. ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ ಒಟಿಪಿಯನ್ನು ನಮೂದಿಸಿ, ಪಾಸ್ವರ್ಡ್ ನಮೂದಿಸಿ, ಸೈನ್ ಅಪ್ ಬಟನ್ ಕ್ಲಿಕ್ ಮಾಡಬೇಕು.
ಈಗ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಮಾಡಬಹುದು. 1 ರಿಂದ 6 ರವರೆಗೆ ನೋಂದಣಿ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಮೊಬೈಲ್ ಆಪ್ನಿಂದ ಇದೇ ಲಾಗಿನ್ ಮತ್ತು ಪಾಸ್ವರ್ಡ್ ಬಳಸಿ ಡಿಜಿಟಲ್ ಗ್ರಂಥಾಲಯವನ್ನು ಉಪಯೋಗಿಸಬಹುದಾಗಿದೆ ಎನ್ನುತ್ತಾರೆ ಜಿಲ್ಲಾ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ.
ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್, ಸಹ ಗ್ರಂಥಪಾಲಕ ಮೋಹನ್ ದಾಸ್, ಗ್ರಂಥಾಲಯ ಸಹಾಯಕ ಗೋಪಾಲ್, ಸಿಬ್ಬಂದಿ ಹೇಮಲತಾ, ಕವಿತಾ ಇದ್ದರು.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…