ಚಿತ್ರದುರ್ಗ, ಸೆಪ್ಟೆಂಬರ್.29 : ನಗರದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು.
ಎನ್.ಎಸ್.ಎಸ್. ಘಟಕ-1 ಮತ್ತು 2 ಹಾಗೂ ದಾವಣಗೆರೆ ವಿಶ್ವವಿದ್ಯಾಲಯೊ ರಾಷ್ಟ್ರೀಯ ಸೇವಾ ಯೋಜನೆ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪ್ರಾಚಾರ್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ ಅಧ್ಯಕ್ಷತೆ ವಹಿಸಿದ್ದರು. ನಂತರ ಕಾಲೇಜಿನ ಆವರಣದಲ್ಲಿ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯವನ್ನು ಮಾಡಲಾಯಿತು.
60 ಕ್ಕೂ ಹೆಚ್ಚು ಸ್ವಯಂ ಸೇವಕರು, ಪ್ರಾಧ್ಯಾಪಕರುಗಳಾದ ಪ್ರೊ. ಆರ್.ಕೆ. ಕೇದಾರನಾಥ್, ಸಿ.ಎನ್. ವೆಂಕಟೇಶ್, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಟಿ.ಎನ್. ರಜಪೂತ್, ಪ್ರೊ. ಬಿ. ನಾಗರಾಜ ಭಾಗವಹಿಸಿದ್ದರು.
ದಿ. 22-09-2023ರಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕವು ಜಿಲ್ಲಾಮಟ್ಟದಲ್ಲಿ ಯುವಜನೋತ್ಸವದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿ ಸಿದ್ದ ಹೆಚ್‍ಐವಿ/ಏಡ್ಸ್ ಕುರಿತ ನಾಟಕ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಾದ ಶಿವಕುಮಾರ್ ಸ್ವಾಗತಿಸಿದರು. ಎ. ಶ್ರೀನಿವಾಸರೆಡ್ಡಿ ಪ್ರಮಾಣ ವಚನ ಬೋಧಿಸಿದರು. ಜಗದೀಶ ಸಿ. ನಿರೂಪಿಸಿದರು.