Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಅ.31 ರಂದು ‘ರಾಷ್ಟ್ರೀಯ ಏಕತಾ ದಿವಸ’ ಆಚರಣೆ: ರಾಜ್ಯ ಸರ್ಕಾರ ಆದೇಶ

---Advertisement---

ಬೆಂಗಳೂರು: ದಿವಂಗತ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಅಕ್ಟೋಬರ್ 31 ರಂದು ರಾಜ್ಯಾದ್ಯಂತ “ರಾಷ್ಟ್ರೀಯ ಏಕತಾ ದಿವಸ”ವನ್ನು ಆಚರಿಸಲು ಕರ್ನಾಟಕ ಸರ್ಕಾರ ನಿರ್ದೇಶನ ನೀಡಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರ ಪತ್ರದ ಅನ್ವಯ, ಅಕ್ಟೋಬರ್ 31 ರಂದು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಕಚೇರಿಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ “ಪ್ರತಿಜ್ಞಾ ವಿಧಿ” ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಜೊತೆಗೆ, ಏಕತೆಯ ಸಂದೇಶವನ್ನು ಎಲ್ಲೆಡೆ ಪ್ರಸರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿಶ್ವವಿದ್ಯಾನಿಲಯಗಳ ಕುಲಸಚಿವರು ಸೇರಿದಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಆದೇಶಿಸಲಾಗಿದೆ.

Join WhatsApp

Join Now

Join Telegram

Join Now