Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‍ಜೆಎಂ  ಫಾರ್ಮಸಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.12  : ದೇಶದ ಏಕತೆಗೆ ಮತ್ತು ಅಭಿವೃದ್ಧಿಗೆ ಯುವಶಕ್ತಿಗೆ ಸ್ವಾಮಿವಿವೇಕಾನಂದರ ಮೂಲಮಂತ್ರ “ಏಳಿ ಎದ್ದೇಳಿ ಎಚ್ಚರಗೊಳ್ಳಿ ಮತ್ತು ಗುರಿಯನ್ನು ತಲುಪುವವರೆಗೆ ನಿಲ್ಲಬೇಡಿ. ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ಮತ್ತು ದೇಶವನ್ನು ಸುಭದ್ರವಾಗಿ ಕಟ್ಟಲು ಇದೊಂದು ಸಂದೇಶ ಸಾಕು ಎಂದು

ರೆಡ್ ಕ್ರಾಸ್ ಸಮಿತಿಯ ಕಾರ್ಯದರ್ಶಿ ಮಜುರುಲ್ಲಾ ಹೇಳಿದರು.

ನಗರದ ಎಸ್‍ಜೆಎಂ  ಫಾರ್ಮಸಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅವರ 161ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ನಂತರ ಪ್ರಾಂಶುಪಾಲ ಡಾ. ಟಿ. ಎಸ್. ನಾಗರಾಜ್ ಅವರು ಮಾತನಾಡಿ,  ಯುವ ಜನತೆಗೆ ಜಾಗೃತರಾಗಿ ನೀವು ಓದುತ್ತಿರುವ ಗುರಿಯನ್ನು ತಲುಪಿ ಕಾಲೇಜಿಗೆ ಮತ್ತು ರಾಷ್ಟ್ರಕ್ಕೆ ಆಸ್ತಿಯಾಗಿ ಬೆಳೆಯಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಯುವ ದಿನದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಮೊದಲ ಬಹುಮಾನವನ್ನು ಪೂಜಾ ಬಿ ಸಿ ಎಂ ಫಾರ್ಮ ಎರಡನೇ ಬಹುಮಾನವನ್ನು ನೇಹಾ ಯು ಎಂ ಫಾರ್ಮ ಡಿ ಹಾಗೂ ತೃತೀಯ ಬಹುಮಾನವನ್ನು ಬಿ ಕೀರ್ತಿ ಬಿ ಫಾರ್ಮ ವಿದ್ಯಾರ್ಥಿಗಳು ಬಹುಮಾನವನ್ನು ಪಡೆದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಚೈತ್ರ ಮತ್ತು ಸಂಗಡಿಗರು ಹಾಡಿದರು. ಸ್ವಾಗತವನ್ನು  ಶಮಂತಕ ಮಣಿ, ವಂದನಾರ್ಪಣೆಯನ್ನು ಕಿರಣï ಹಾಗೂ ನಿರ್ವಹಣೆಯನ್ನು ಚಂದನ್ ಎಂ ಫಾರ್ಮಾ ವಿದ್ಯಾರ್ಥಿಗಳು ನೆರವೇರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment