ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ , ಸೆಪ್ಟೆಂಬರ್. 19 : ಭಾರತೀಯ ಜನತಾಪಾರ್ಟಿ ಎಸ್.ಟಿ.ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಚಳ್ಳಕೆರೆಯ ನವೀನ್ ಎನ್. ಇವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.
ಈ ಹಿಂದೆ ಚಳ್ಳಕೆರೆ ರೈತ ಮೋರ್ಚಾ ಮಂಡಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನವೀನ್ ಎನ್. ಇವರ ಪಕ್ಷ ನಿಷ್ಠೆಯನ್ನು ಗುರುತಿಸಿ ಎಸ್.ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಕೆ.ಟಿ.ಕುಮಾರಸ್ವಾಮಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದ್ದಾರೆ.











