ಚಿತ್ರದುರ್ಗ,(ಆ.10) : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದ 2024-25ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಇದೇ ಆಗಸ್ಟ್ 17 ರವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ
https://cbseitms.rcil.gov.in/nvs/index/registration ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9740133395, 8310337524 ಗೆ ಸಂಪರ್ಕಿಸಬಹುದು ಎಂದು ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಡೆನಿಯಲ್ ರೆತನ್ ಕುಮಾರ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















