Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದುರ್ಗೋತ್ಸವ ಆಚರಿಸುವಂತೆ ನಾಯಕ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿರವರಿಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ

ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 25 : ಹಂಪಿ, ಕಿತ್ತೂರು ಉತ್ಸವದಂತೆ ಪ್ರತಿ ವರ್ಷವೂ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಚಿತ್ರದುರ್ಗ ನಾಯಕ ಸಮಾಜದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಮಾರ್ಚ್ ಅಥವಾ ಏಪ್ರಿಲ್‍ನಲ್ಲಿ ದುರ್ಗೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಬೇಕೆಂಬುದು ದುರ್ಗದ ಜನರ ಒತ್ತಾಸೆಯಾಗಿರುವುದರಿಂದ ಈ ಬಾರಿಯ ರಾಜ್ಯ ಬಜೆಟ್ ಮಂಡನೆಯಲ್ಲಿ ಸೇರಿಸುವಂತೆ ನಾಯಕ ಸಮಾಜದವರು ಸಚಿವರನ್ನು ಒತ್ತಾಯಿಸಿದರು.

ತ.ರಾ.ಸು.ರಂಗಮಂದಿರದಲ್ಲಿ ನಡೆದ ಸಂವಿಧಾನ ರಕ್ಷಾ ಅಭಿಯಾನ ಉದ್ಗಾಟನೆಗಾಗಿ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೊಳಿರವರಿಗೆ ಮನವಿ ಸಲ್ಲಿಸಿ ಐತಿಹಾಸಿಕ ಚಿತ್ರದುರ್ಗ ಕೋಟೆಯನ್ನು ರಾಜವೀರ ಮದಕರಿನಾಯಕ ಆಳಿರುವುದರಿಂದ ಚಿತ್ರದುರ್ಗಕ್ಕೆ ತನ್ನದೆ ಆದ ಗತ ವೈಭವವಿದೆ. ಹಾಗಾಗಿ ಪ್ರತಿ ವರ್ಷವೂ ದುರ್ಗೋತ್ಸವ ಆಚರಿಸಿದರೆ ಚಿತ್ರದುರ್ಗದ ಇತಿಹಾಸ ಸಂಸ್ಕøತಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ವಿನಂತಿಸಿದರು.

ನಾಯಕ ಸಮಾಜದ ಮುಖಂಡರುಗಳಾದ ಎ.ತಿಪ್ಪೇಸ್ವಾಮಿ, ಎಸ್.ಮಂಜುನಾಥ, ವೆಂಕಟೇಶ್, ಅಶೋಕ್‍ಬೆಳಗಟ್ಟ, ರವಿ ಈ ಸಂದರ್ಭದಲ್ಲಿ ಹಾಜರಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...