Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 13 ರಂದು ನಾಯಕನಹಟ್ಟಿ ಬಂದ್ : ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ನಿರ್ಣಯ

Facebook
Twitter
Telegram
WhatsApp

 

ಸುದ್ದಿಒನ್, ನಾಯಕನಹಟ್ಟಿ, ಫೆಬ್ರವರಿ.06 : ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ನೀರಾವರಿ ಆನುಷ್ಠಾನ ಹೋರಾಟ ಸಮಿತಿಯು ಫೆಬ್ರವರಿ 13ರ ಮಂಗಳವಾರ ನಾಯಕಹನಟ್ಟಿ ಬಂದ್ ಗೆ ಕರೆ ನೀಡಿದೆ.
ಹಟ್ಟಿ ಮಲ್ಲಪ್ಪನಾಯಕ ಸಂಘದ ಆಡಳಿತ ಕಚೇರಿಯಲ್ಲಿ ಮಂಗಳವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಹೋಬಳಿ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸ್ವಯಂ ಪ್ರೇರಿತ ಬಂದ್ ಆಚರಿಸುವುದರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಹೋಬಳಿ ಅಧ್ಯಕ್ಷ ಜಿ.ಬಿ.ಮುದಿಯಪ್ಪ, ದೇಶಕ್ಕಾಗಿ ನಾಯಕನಹಟ್ಟಿ ಹೋಬಳಿ ಜನ ಅಪಾರ ಪ್ರಮಾಣದಲ್ಲಿ ತ್ಯಾಗ ಮಾಡಿದ್ದಾರೆ. ಡಿಆರ್ ಡಿಓ ಸೇರಿದಂತೆ  ಹಲವು ವೈಜ್ಞಾನಿಕ ಸಂಸ್ಥೆಗಳಿಗೆ 13 ಸಾವಿರ  ಎಕರೆ ಭೂಮಿ ಬಿಟ್ಟುಕೊಟ್ಟು ಕೊಟ್ಟಿದ್ದಾರೆ. ಇಂತಹ ತ್ಯಾಗಿಗಳ ಬದುಕು ಹಸನಾಗಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕರ್ತವ್ಯ. ಭದ್ರಾ ಮೇಲ್ದಂಡೆ ಯೋಜನೆಯಡಿ ಚಳ್ಳಕೆರೆ ತಾಲೂಕಿನ ಎಲ್ಲ ಕೆರೆಗಳ ಶೀಘ್ರ ತುಂಬಿಸಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ನಿಧಾನಗತಿಯಲ್ಲಿ ಸಾಗಿದೆ. ಚಳ್ಳಕೆರೆ, ಮೊಳಕಾಲ್ಮುರು, ಜಗಳೂರು ತಾಲೂಕುಗಳ ಕಡೆಗಣನೆ ಮಾಡಲಾಗಿದೆ. ಈ ಭಾಗದ ಜನರ ತಾಳ್ಮೆ ಪರೀಕ್ಷೆ ಮಾಡಲು ಸರ್ಕಾರ ಮುಂದಾಗಬಾರದು. ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಿ ಕೆರೆಗಳ ತುಂಬಿಸಬೇಕು. ಈ  ಭಾಗದಲ್ಲಿಯೂ ಡ್ರಿಪ್ ಇರಿಗೇಷನ್ ಪ್ರಾಜೆಕ್ಟ್ ಜಾರಿ ಮಾಡಬೇಕೆಂದು ಒತ್ತಾಯಿಸಿದರು.
ಚಿಂತಕ ಜಗಳೂರು ಯಾದವರೆಡ್ಡಿ ಮಾತನಾಡಿ,  ಭದ್ರಾ ಮೇಲ್ದೆಂಡೆ ಕಾಮಗಾರಿ ಶೀಘ್ರ ಮುಗಿಸುವ ಇರಾದೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಇದ್ದಂತಿಲ್ಲ. ಜನರ ಭಾವನೆಗಳ ಜೊತೆ ಯಾವುದೇ ಸರ್ಕಾರಗಳು ಚೆಲ್ಲಾಟವಾಡಬಾರದು.ಭದ್ರಾದ ನಂತರ ಕೈಗೆತ್ತಿಕೊಳ್ಳಲಾದ ಎತ್ತಿನಹೊಳೆ ಯೋಜನೆಗೆ 12 ಸಾವಿರ ಕೋಟಿ ರುಪಾಯಿ ವ್ಯಯ ಮಾಡಿರುವ ರಾಜ್ಯ ಸರ್ಕಾರ ಭದ್ರಾ ಮೇಲ್ಡಂಡೆ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಸರ್ಕಾರವ  ಎಚ್ಚರಿಸಲು ಹೋರಾಟವೊಂದೇ ಅನಿವಾರ್ಯ. ನಿರ್ಣಾಯಕ ಹೋರಾಟದ ಮೂಲಕ ಬಹುದಿನಗಳ ಕನಸನ್ನು ಈಡೇರಿಸಿಕೊಳ್ಳಲು ಎಲ್ಲರೂ ಮುಂದಾಗಬೇಕೆಂದರು.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತನಾಡಿ ಇದು ಪಕ್ಷಾತೀತ ಹೋರಾಟವಾಗಿದ್ದು ಜನರ ಬದುಕು ಪ್ರಧಾನವಾಗಿರಿಸಿಕೊಂಡು ಮುನ್ನಡೆಯಲಾಗುತ್ತಿದೆ. ಯಾವುದೇ ಪಕ್ಷದ ವಿರುದ್ದ ನಮ್ಮ ಹೋರಾಟವಲ್ಲ. ಭದ್ರಾ ಮೇಲ್ಡಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಎನ್ನುವುದು ನಮ್ಮ ಹಕ್ಕೊತ್ತಾಯ. ಕೇಂದ್ರ ಸರ್ಕಾರದ ಅನುದಾನ ಕೊಡುತ್ತದೆ ಎಂದು ರಾಜ್ಯ ಸರ್ಕಾರ ಕಾಯವುದು, ರಾಜ್ಯ ಮೊದಲು ಖರ್ಚು ಮಾಡಲಿ ಎಂದು ಕೇಂದ್ರ ಉದಾಸೀನ ತೋರುವುದು ತರವಲ್ಲದ ನಡವಳಿಕೆಯಾಗಿದೆ. ಅನುದಾನ ಎಲ್ಲಿಂದ ತರುತ್ತಾರೋ ನಮಗದು ಬೇಕಾಗಿಲ್ಲ. ಆಧ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಿ ಎಂಬುದು ನಮ್ಮ ಬೇಡಿಕೆ ಎಂದರು.
ಭದ್ರಾ ಕಾಮಗಾರಿಗೆ ಹಣ ಒದಗಿಸುವಂತೆ ಆಗ್ರಹಿಸಿ ಈಗಾಗಲೇ ಚಿತ್ರದುರ್ಗ ಬಂದ್ ನಡೆದಿದೆ. ಫೆಬ್ರವರಿ 9 ರಂದು ಚಳ್ಳಕೆರೆ ಬಂದ್ ಕರೆಯಲಾಗಿದೆ. ಜಿಲ್ಲಾ ಪಂಚಾಯಿತಿ ಮುಂಭಾಗ ರೈತ ಸಂಘ  ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ. ಚಿತ್ರದುರ್ಗದ ನೆಲದಲ್ಲಿ ಹೆಚ್ಚು ಹೋರಾಟಗಳು ದಾಖಲಾಗುವುದರ ಮೂಲಕ ಬಹುದಿನಗಳ ನೀರಾವರಿ ಕನಸು ಸಾಕಾರಗೊಳಿಸಿಕೊಳ್ಳಬೇಕಿದೆ. ಇದಕ್ಕಾಗಿ ಸಂಘಟಿತ ಪ್ರಯತ್ನ ಅಗತ್ಯವೆಂದರು. ಫೆಬ್ರವರಿ 13 ರಂದು ಸ್ವಯಂ ಪ್ರೇರಿತ ನಾಯಕನಹಟ್ಟಿ ಬಂದ್ ಕೈಗೊಳ್ಳುವ ತೀರ್ಮಾನ ಕೈಗೊಳ್ಳಲಾಯಿತು.
ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಹೋಬಳಿ  ಉಪಾಧ್ಯಕ್ಷ ಮಹಾಂತೇಶ್ ದೇವರಹಳ್ಳಿ, ಆರ್ ಬಸಪ್ಪ, ಗುಂತಕೋಲಮ್ಮನಹಳ್ಳಿ ಚಂದ್ರಣ್ಣ, ಕಾರ್ಯಧ್ಯಕ್ಷ ಎಸ್. ಟಿ ಬೋರ್ ಸ್ವಾಮಿ, ಗೌಡಗೆರೆ ಟಿ ರಂಗಪ್ಪ, ಚೇರ್ಮನ್ ತಿಪ್ಪೇಸ್ವಾಮಿ, ಏಜೆಂಟ್ರು ಪಾಲಯ್ಯ, ರೇಖಲಗೆರೆ ವೀರೇಶ್, ಅಶೋಕ್, ಅಬ್ಬೇನಹಳ್ಳಿ ಎಂ ಎಸ್ ಶಿವಪ್ರಕಾಶ್, ಕೆ.ಟಿ ನಾಗರಾಜ್ ಮಲ್ಲೂರಹಳ್ಳಿ, ತೊರೆಕೋಲಮ್ಮನಹಳ್ಳಿ, ಮಂಜಣ್ಣ, ರಾಮಸಾಗರ ಪಿ.ಪಿ ಮಹಾಂತೇಶ್ ನಾಯಕ, ಜಯಣ್ಣ, ಆರ್ ತಿಪ್ಪೇಸ್ವಾಮಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!