ಚಿತ್ರದುರ್ಗ. ಮಾರ್ಚ್16: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ ಶ್ರೀಕ್ಷೇತ್ರ ನಾಯಕನಹಟ್ಟಿ ನೆಲಸಿದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಸುಡು ಬಿಸಿಲ ನಡುವೆಯೂ ಲಕ್ಷಾಂತರ ಭಕ್ತರು ವೈಭವದ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಸಾಕ್ಷೀಯಾದರು. ಭಕ್ತಿ ಭಾವ ಸಮರ್ಪಿಸಿದರು.
ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಗುರು ತಿಪ್ಪೇರುದ್ರಸ್ವಾಮಿಯ ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು. ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ, ರಥೋತ್ಸವದ ಬಳಿ ತಂದು ಸಜ್ಜುಗೊಳಿಸಲಾಯಿತು. ಮಧ್ಯಾಹ್ನ 4.05 ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ತೇರುಬೀದಿಯಿಂದ ಹೊರಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.
ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇಷ್ಠಾರ್ಥವನ್ನು ಈಡೇರಿಸುವಂತೆ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತಾ ‘ ಶ್ರೀ.ತಿಪ್ಪೇರುದ್ರಸ್ವಾಮಿಗೆ ಜಯವಾಗಲಿ’, ‘ಕಾಯಕ ಯೋಗಿಗೆ ಜಯವಾಗಲಿ’ ತಿಪ್ಪೇರುದ್ರಸ್ವಾಮಿ ಮಹಾರಾಜ್ ಕಿ ಜೈ ಎನ್ನುವ ಜಯಘೋಷ ಕೂಗುತ್ತಾ ರಥದ ದೊಡ್ಡ ಗಾತ್ರದ ಮಿಣಿ ಹಗ್ಗ ಎಳೆದು ಧನ್ಯರಾದರು.ನಾಡಿನ ಸುಭೀಕ್ಷೆ ಹಾಗೂ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…