Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ ಜಾತ್ರಾ ಮಹೋತ್ಸವ : ವಿಶೇಷ ಬಸ್‌ಗಳ ಕಾರ್ಯಾಚರಣೆ

---Advertisement---

ಚಿತ್ರದುರ್ಗ. ಮಾ.02:  ಮಾರ್ಚ್ 6 ರಂದು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿಯ, ತಿಪ್ಪೇರುದ್ರಸ್ವಾಮಿಯ ದೊಡ್ಡರಥೋತ್ಸವ ಜರುಗಲಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 7ನೇ ತಾರೀಖಿನವರೆಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಪಾವಗಡ ಘಟಕಗಳಿಂದ ಜಾತ್ರಾ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

 

ಚಿತ್ರದುರ್ಗ ನಾಯಕನಹಟ್ಟಿ ಮಾರ್ಗದ ಬಸ್‌ಗಳು ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ ಮೂಲಕ, ಚಳ್ಳಕೆರೆ-ನಾಯಕನಹಟ್ಟಿ ಮಾರ್ಗದ ಬಸ್‌ಗಳು ನರ‍್ಲಗುಂಟೆ ಮೂಲಕ, ಹಿರಿಯೂರು-ನಾಯಕನಹಟ್ಟಿ ಬಸ್‌ಗಳು ಸಾಣಿಕೆರೆ, ಚಳ್ಳಕೆರೆ, ನರ‍್ಲಗುಂಟೆ ಮೂಲಕ ಹಾಗೂ ನಾಯಕನಹಟ್ಟಿ-ಪರುಶುರಾಂಪುರ ಮಾರ್ಗದ ಬಸ್‌ಗಳು ಚಳ್ಳಕೆರೆಯ ಮೂಲಕ ಸಂಚರಿಸಲಿವೆ.
ಸಾರ್ವಜನಿಕರು ವಿಶೇಷ ಬಸ್‌ಗಳ ಸದುಪಯೋಗ ಪಡೆದುಕೊಳ್ಳುವಂತೆ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now