Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ ಜಾತ್ರೆ : 200  ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ

---Advertisement---

ಚಿತ್ರದುರ್ಗ. ಮಾ.06: ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 15 ರಿಂದ 17 ರವರೆಗೆ ಜರುಗಲಿರುವ ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವ  ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ. ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ. ಹಿರಿಯೂರು-ನಾಯಕನಹಟ್ಟಿ ವಯಾ ಸಾಣಿಕೆರೆ-ಚಳ್ಳಕೆರೆ-ನೇರ್ಲಗುಂಟೆ. ನಾಯಕನಹಟ್ಟಿ-ಪರಶುರಾಂಪು ವಯಾ ಚಳ್ಳಕೆರೆ ಮಾರ್ಗದಲ್ಲಿ ಸಂಚರಿಸಲಿವೆ.

ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment