ಚಿತ್ರದುರ್ಗ. ಜ.22: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿಯ 2026ನೇ ಸಾಲಿನ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆಯನ್ನು ಇದೇ ಜ.26ರಂದು ಮಧ್ಯಾಹ್ನ 3ಕ್ಕೆ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದಲ್ಲಿ ಏರ್ಪಡಿಸಲಾಗಿದೆ.
ನಾಯಕನಹಟ್ಟಿ ಜಾತ್ರೆಯು 2026ರ ಫೆ.27 ರಿಂದ ಮಾರ್ಚ್ 09 ರವರೆಗೆ ನಡೆಯಲಿದ್ದು, ಮಾರ್ಚ್ 06ರಂದು ದೊಡ್ಡ ರಥೋತ್ಸವ ನಡೆಯಲಿದ್ದು, ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.






