ಚಿತ್ರದುರ್ಗ, (ಡಿ.16) : ಕೆರೆ ನೋಡಲು ಹೋಗಿದ್ದವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಇಂದು (ಶುಕ್ರವಾರ) ಮಧ್ಯಾನ್ಹ ಒಂದು ಗಂಟೆ ಸುಮಾರಿಗೆ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡ ಕೆರೆ ನೋಡಲು ಹೋಗಿದ್ದ ತಂದೆ ತಾಯಿ ಇಬ್ಬರು ಮಕ್ಕಳು ಹೋಗಿದ್ದರು.ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನಾಲ್ವರೂ ಸಾವನ್ನಪ್ಪಿದ್ದಾರೆ. ಇವರೆಲ್ಲರೂ
ಬೋಸದೇವರಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ದೇವರ ಜಾತ್ರೆಗೆ ಬಂದಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳುಕು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನೆ ನಡೆದ ಬಗ್ಗೆ ನಿಖರವಾದ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.


